ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಾತೀಯತೆ ನಿವಾರಣೆಗೆ ಶಿಕ್ಷಣವೇ ಪರಿಹಾರ’

Last Updated 18 ಏಪ್ರಿಲ್ 2017, 5:37 IST
ಅಕ್ಷರ ಗಾತ್ರ

ಗದಗ: ಸಮಗಾರ ಸಮುದಾಯದ ಜನರು ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಶಿಸ್ತುಬದ್ಧ ಜೀವನದ ಮೂಲಕವೇ ಉನ್ನತ ಸ್ಥಾನವನ್ನು ಏರುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅಭಿಪ್ರಾಯಪಟ್ಟರು.ನಗರದ ಕೆ.ಎಚ್.ಪಾಟೀಲ ಸಭಾಭವನದಲ್ಲಿ ಭಾನುವಾರ ನಡೆದ ಶಿವಶರಣ ಸಮಗಾರ ಹರಳಯ್ಯನವರ 850ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಗಾರ ಸಮುದಾಯದವರು ಸರ್ಕಾರದಿಂದ ದೊರೆಯುವ ಸೌಲಭ್ಯ ಗಳನ್ನು ಪಡೆದುಕೊಂಡು ಅಭಿವೃದ್ಧಿ ಹೊಂದಬೇಕು ಎಂದ ಅವರು, ಅವಳಿ ನಗರದಲ್ಲಿ ಸಮಗಾರ ಸಮುದಾಯದ ಫಲಾನುಭವಿಗಳಿಗೆ 250 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಸೂರು ರಹಿತ ಮುಕ್ತ ಸಮುದಾಯವಾಗಲಿದೆ ಎಂದು ತಿಳಿಸಿದರು.

ಸಮಗಾರ ಸಮುದಾಯದಲ್ಲಿ ಶ್ರೀಮಂತರು, ವಿದ್ಯಾವಂತರ ಸಂಖ್ಯೆ ಕಡಿಮೆ ಇದೆ. ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವತ್ತ ಗಮನಹರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ತಿಳಿಸಿದರು.12ನೇ ಶತಮಾನದಿಂದಲೇ ಜಾತೀಯತೆ, ಅಸಮಾನತೆ ಹೋಗಲಾಡಿಸಲು ಹೋರಾಟ ಆರಂಭವಾಗಿದೆ. ಆದರೆ, ಸದ್ಯ ಚುನಾವಣೆ ಬಂದಂತೆಲ್ಲ ಜಾತೀಯತೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದು ವಿಷಾದನೀಯ. ಇದಕ್ಕೆ ಶಿಕ್ಷಣವೊಂದೇ ಮದ್ದು ಎಂದರು.

ಡಾ.ಬಾಬು ಜಗಜೀವನರಾಮ್ ಧರ್ಮ ಕೈಗಾರಿಕಾಭಿವೃದ್ಧಿ ನಿಗಮದ ಅಧ್ಯಕ್ಷ ಓ.ಶಂಕರ, ಬಳಗಾನೂರಿನ ಶಿವಶಾಂತವೀರ ಶರಣರು ಕಾರ್ಯಕ್ರಮದಲ್ಲಿ  ಮಾತನಾಡಿ, ಧರ್ಮ ಕಾರ್ಯದಿಂದ ಮಾತ್ರ ಯಶಸ್ಸು, ಮುಕ್ತಿ ಎಂದರು.ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.ನಗರಸಭೆ ಸದಸ್ಯ ಎಲ್.ಡಿ. ಚಂದಾವರಿ, ಮಾಜಿ ಶಾಸಕ ಡಿ.ಆರ್.ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಗುರಣ್ಣ ಬಳಗಾನೂರ, ಪ್ರೇಮನಾಥ ಗರಗ, ಹೂವಪ್ಪ ಚಂದಾವರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT