ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುಲ್ಕ ವಿನಾಯಿತಿಗೆ ಒತ್ತಾಯ

Last Updated 18 ಏಪ್ರಿಲ್ 2017, 6:01 IST
ಅಕ್ಷರ ಗಾತ್ರ

ಬಸವನಬಾಗೇವಾಡಿ:  2015–16 ಹಾಗೂ 2016–17ನೇ ಸಾಲಿನ ಪದವಿ ವಿದ್ಯಾರ್ಥಿಗಳ ಶುಲ್ಕ ವಿನಾಯಿತಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಸೋಮವಾರ ಎಬಿವಿಪಿ ನೇತೃತ್ವದಲ್ಲಿ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.ಕಾಲೇಜು ಆವರಣದಿಂದ ಮೆರವಣಿಗೆ ಮೂಲಕ ತಹಶೀಲ್ದಾರ ಕಚೇರಿಗೆ ತೆರಳಿದ ವಿದ್ಯಾರ್ಥಿಗಳು ಗ್ರೇಡ್‌–2 ತಹಶೀಲ್ದಾರ ಎಂ.ಇಸ್ಮಾಯಿಲ್ ಅವರಿಗೆ ಮನವಿ ಸಲ್ಲಿಸಿದರು.

ಎಬಿವಿಪಿ ತಾಲ್ಲೂಕು ಘಟಕದ ಸಂಚಾಲಕ ಸಚಿನ ಕೊಳಗೇರಿ, ಮುತ್ತು ಹಾಲಿಹಾಳ ಮಾತನಾಡಿ, ಪಟ್ಟಣದ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಮಂಜೂರು ಆಗದಿರುವುದರಿಂದ  ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ ಎಂದರು. ಹಣ ಮಂಜೂರಾತಿಯಾಗದೇ ಇರುವುದಕ್ಕೆ ಅಧಿಕಾರಿಗಳ ಬೇಜವಾಬ್ದಾರಿತನವೇ ಕಾರಣ.

ವಿದ್ಯಾರ್ಥಿಗಳ ಶುಲ್ಕ ವಿನಾಯಿತಿ ಮಂಜೂರು ಆಗದಿದ್ದರೆ  ಮುಂದಿನ ದಿನಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.  ಮನವಿ ಸ್ವೀಕರಿಸಿದ ಗ್ರೇಡ್‌–2 ತಹಶೀಲ್ದಾರ್‌ರು ಬಿಸಿಎಂ ಇಲಾಖೆ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದಾಗ ಒಂದು ವಾರದ ಒಳಗಾಗಿ ಶುಲ್ಕ ವಿನಾಯಿತಿ ಮಂಜೂರು ಮಾಡಲಾಗುವುದು ಎಂದು ಬಿಸಿಎಂ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು.  ಸಂತೋಷ ಪಟೇದ ಸುರೇಶ ಜಂಗೋಣಿ, ಮುತ್ತು ಬಸ್ತಾಳ, ರವಿ ಹಿಪ್ಪರಗಿ, ಭೀರೇಶ ಮರಗಲದಿನ್ನಿ, ರಾಯಪ್ಪ ಪೂಜಾರಿ, ಬಸವರಾಜ ಗೊಳಸಂಗಿ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT