ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಮಕ್ಕೆ ಆಗ್ರಹ; ಎಸ್‌ಎಫ್‌ಐ ಪ್ರತಿಭಟನೆ

Last Updated 18 ಏಪ್ರಿಲ್ 2017, 6:54 IST
ಅಕ್ಷರ ಗಾತ್ರ

ಹೊಸಪೇಟೆ: ಗುಲ್ಬರ್ಗ ವಿಶ್ವವಿದ್ಯಾಲಯ ದಲ್ಲಿ ಸಂಶೋಧನಾ ವಿದ್ಯಾರ್ಥಿನಿಯ ಸಾವಿಗೆ ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್‌ಎಫ್‌ಐ) ಸೋಮವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿತು.ಬಳಿಕ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಗ್ರೇಡ್‌–2 ತಹಶೀಲ್ದಾರ್‌ ರೇಣುಕಾ ಅವರಿಗೆ ಸಲ್ಲಿಸಲಾಯಿತು.

ಸಂಶೋಧನಾ ವಿದ್ಯಾರ್ಥಿನಿ ಶ್ರೀದೇವಿ ಅವರ ಸಾವಿಗೆ ಮಾರ್ಗದರ್ಶಕರೇ ಕಾರಣ ಎನ್ನುವುದು ತಿಳಿದು ಬಂದಿದೆ. ಅಷ್ಟೇ ಅಲ್ಲ, ಹಣಕ್ಕಾಗಿ ಶ್ರೀದೇವಿ ಅವರಿಗೆ ಕಿರುಕುಳ ನೀಡಿದ್ದರಿಂದ ಅವರು ಖಿನ್ನ ತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ ಎನ್ನಲಾಗಿದೆ. ಹಣಕ್ಕಾಗಿ ವಿದ್ಯಾರ್ಥಿ ನಿಯ ಜೀವ ಹೋಗಿದ್ದು, ತಡಮಾಡದೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿ ಗಳಿಗೆ ಸೂಚನೆ ನೀಡಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಶ್ರೀದೇವಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಸಹ ನಡೆದಿದೆ ಎಂದು ತಿಳಿದು ಬಂದಿದೆ. ಈಚಿನ ದಿನಗಳಲ್ಲಿ ವಿಶ್ವವಿದ್ಯಾ ಲಯಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿವೆ. ಇವುಗಳನ್ನು ತಡೆಯಲು ರಾಜ್ಯದ ಎಲ್ಲ ವಿ.ವಿ.ಗಳಲ್ಲಿ ಪ್ರತ್ಯೇಕ ವಿದ್ಯಾರ್ಥಿನಿಯರ ರಕ್ಷಣಾ ಘಟಕ ಸ್ಥಾಪಿಸಬೇಕು. ಮೃತ ಶ್ರೀದೇವಿಯವರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ಪೊಲೀಸರು ಯಾರ ಪ್ರಭಾ ವಕ್ಕೂ ಒಳಗಾಗದೆ ಮಾರ್ಗದರ್ಶಕರು ಸೇರಿದಂತೆ ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಫೆಡರೇಶನ್‌ನಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗು ವುದು ಎಂದು ಎಚ್ಚರಿಕೆ ನೀಡಲಾಗಿದೆ. ಫೆಡರೇಶನ್‌ ಮುಖಂಡರಾದ ದೊಡ್ಡ ಬಸವರಾಜು, ಭೀಮನಗೌಡ, ಸಂಧ್ಯಾ, ಎಸ್‌.ಬಿ. ಶಾಂತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT