ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘457 ವೀಸಾ’ ರದ್ದುಪಡಿಸಿದ ಆಸ್ಟ್ರೇಲಿಯಾ

Last Updated 18 ಏಪ್ರಿಲ್ 2017, 9:32 IST
ಅಕ್ಷರ ಗಾತ್ರ

ಮೆಲ್ಬರ್ನ್‌: ಭಾರತೀಯರ ಅಚ್ಚುಮೆಚ್ಚಿನ ವೀಸಾ ಎಂದೇ ಜನಪ್ರಿಯವಾಗಿದ್ದ ‘457 ವೀಸಾವನ್ನು’ ಆಸ್ಟ್ರೇಲಿಯಾ ಸರ್ಕಾರ ರದ್ದು ಮಾಡಿದೆ.

ಆಸ್ಟ್ರೇಲಿಯಾ ಪ್ರಧಾನಿ ಮಾಲ್ಕಂ ಟರ್ನ್‌ಬುಲ್‌ ಅವರು ‘457 ವೀಸಾ’ ರದ್ದು ಮಾಡಿರುವುದಾಗಿ ತಿಳಿಸಿದರು.

ಈ ವೀಸಾ 4 ವರ್ಷ ಅವಧಿಯದಾಗಿತ್ತು.  ಆಸ್ಟ್ರೇಲಿಯಾ ವೃತ್ತಿಪರ ಮಾನವ ಸಂಪನ್ಮೂಲ ಕೊರೆತೆ ಬಿದ್ದಾಗ 457 ವೀಸಾ ಮೂಲಕ ವಿದೇಶಿ ನೌಕರರನ್ನು ನೇಮಕ ಮಾಡಿಕೊಳ್ಳಲಾಗುತ್ತಿತ್ತು.

ಈ ವೀಸಾ ಅಡಿಯಲ್ಲಿ 95 ಸಾವಿರ ಜನ ಭಾರತೀಯ ಆಸ್ಟ್ರೇಲಿಯಾದಲ್ಲಿ ಕೆಲಸ ಮಾಡುತ್ತಿದ್ದಾರೆ.

ಈ ವೀಸಾ ಅಡಿಯಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಯಾವುದೇ ರೀತಿಯ ತೊಂದರೆಯಾಗದು ಎಂದು ಆಸ್ಟ್ರೇಲಿಯಾ ಸರ್ಕಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT