ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರ ಮೇಲೆ ಹಲವು ನಿರ್ಬಂಧ ವಿಧಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ

ಐಷರಾಮಿ ಮನೆ ಬಿಡಿ, ದೊಡ್ಡ ಪಾರ್ಟಿಗಳಿಗೆ ಹೋಗಬೇಡಿ
Last Updated 18 ಏಪ್ರಿಲ್ 2017, 12:23 IST
ಅಕ್ಷರ ಗಾತ್ರ
ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮುಖ್ಯಮಂತ್ರಿ ಗದ್ದುಗೆ ಹಿಡಿದು ಒಂದು ತಿಂಗಳಾಗಿದ್ದು, ಆಡಳಿತದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ಸಚಿವರ ಮೇಲೆ ಹಲವು ನಿರ್ಬಂಧಗಳನ್ನು ಹೇರಿದ್ದಾರೆ. 
 
ಮುಖ್ಯವಾಗಿ ಸಚಿವರು ಪ್ರತಿವರ್ಷ ಕಡ್ಡಾಯವಾಗಿ ಆಸ್ತಿ ವಿವರ ಸಲ್ಲಿಸಬೇಕು ಎಂದು ತಾಕೀತು ಮಾಡಿದ್ದಾರೆ. ಪ್ರತಿವರ್ಷ ಮಾರ್ಚ್ 31ರೊಳಗೆ ಆಸ್ತಿ ವಿವರ ಸಲ್ಲಿಸಬೇಕು. ಅಲ್ಲದೇ ಗುತ್ತಿಗೆದಾರರು ಮತ್ತು ವ್ಯಾಪಾರಸ್ಥರಿಂದ   ಅಂತರ ಕಾಯ್ದುಕೊಳ್ಳಬೇಕೆಂದು ಕೂಡ ಹೇಳಿದ್ದಾರೆ. 
 
5,000ಕ್ಕಿಂತ ಹೆಚ್ಚು ಮೌಲ್ಯದ ಕೊಡುಗೆ ಸ್ವೀಕರಿಸುವಂತಿಲ್ಲ.  ಸ್ವೀಕರಿಸಿದ್ದಲ್ಲಿ ಅದನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಐಷರಾಮಿ ಬಂಗಲೆಯಲ್ಲಿ ವಾಸಿಸುವುದನ್ನು ಬಿಡಬೇಕು.
 
ದೊಡ್ಡ ದೊಡ್ಡ  ಪಾರ್ಟಿಗಳಲ್ಲಿ ಭಾಗವಹಿಸುವುದರಿಂದ ಹಿಂದೆ ಸರಿಯಬೇಕೆಂದು ಆದಿತ್ಯನಾಥ ಅವರು ಸಚಿವರಿಗೆ ಸೂಚನೆ ನೀಡಿದ್ದಾರೆ. 
 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT