ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೇವು–ನೀರಿನ ತೊಂದರೆಗೆ ಸ್ಪಂದಿಸಿ’

Last Updated 19 ಏಪ್ರಿಲ್ 2017, 5:36 IST
ಅಕ್ಷರ ಗಾತ್ರ

ವಿಜಯಪುರ: ತೀವ್ರ ಬರ ಪರಿಸ್ಥಿತಿ ತಲೆದೋರಿರುವುದರಿಂದ ಜನ–ಜಾನುವಾರುಗಳಿಗೆ ಯಾವುದೇ ಪರಿಸ್ಥಿತಿ ಯಲ್ಲಿ ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾಧಿ ಕಾರಿ, ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಾರ್ಯಾ ಲಯದ ವಿಡಿಯೊ ಕಾನ್ಫರೆನ್ಸ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದ ಮೂಲಕ ಸಿಎಂ ಈ ಸೂಚನೆ ನೀಡಿದರು.

ಜನರಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು. ಮುಂದಿನ ದಿನಗಳಲ್ಲಿ ಬರಬಹುದಾದ ನೀರಿನ ಸಮಸ್ಯೆ ಬಗ್ಗೆ ಮುಂಜಾಗ್ರತೆ ವಹಿಸಿ ಕೊಂಡು ಪರಿಣಾಮಕಾರಿ  ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದರು.ಕುಡಿಯುವ ನೀರಿನ ವಿಷಯದಲ್ಲಿ ನಿರ್ಲಕ್ಷ ತೋರದೇ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ನೀರು ಪೂರೈಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆ ಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊ ಳ್ಳಬೇಕು. ಪೂರ್ವಭಾವಿಯಾಗಿ ಮೇವು ಬೆಳೆಸುವ ಜತೆಗೆ ಅವಶ್ಯಕ ಪ್ರಮಾಣದ ಮೇವನ್ನು ಸಂಗ್ರಹಿಸಿಟ್ಟು ಕೊಂಡು ರೈತರಿಗೆ ಸಕಾಲಕ್ಕೆ ಸ್ಪಂದಿಸ ಬೇಕು. ಯಾವುದೇ ಪರಿಸ್ಥಿತಿಯಲ್ಲಿ ಮೇವಿನ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆ ಯಡಿ ಹೆಚ್ಚೆಚ್ಚು ಮಾನವ ದಿನಗಳನ್ನು ಸೃಜಿಸುವ ಜತೆಗೆ ಹೆಚ್ಚಿನ ಕಾಮಗಾರಿ ಕೈಗೆತ್ತಿ ಕೊಂಡು ಬಡ ಕೂಲಿ ಕಾರ್ಮಿಕರಿಗೆ ಹೆಚ್ಚಿನ ರೀತಿಯಲ್ಲಿ ಉದ್ಯೋಗಾ ವಕಾಶ ನೀಡಬೇಕು. ಕೆರೆ ಸಂಜೀವಿನಿ ಯೋಜನೆ ಯಡಿ ಬರುವ ಎಲ್ಲ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸು ವಂತೆ ಸೂಚಿಸಿದರು.

ರೈತರಿಗೆ ಬೆಳೆ ಪರಿಹಾರಕ್ಕೆ ಸಂಬಂಧ ಪಟ್ಟಂತೆ ಬರುವ ಒಂದು ವಾರದ ಅವಧಿ ಯೊಳಗೆ ಆಧಾರ್‌ ಜೋಡಣೆ ಕಾರ್ಯ ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿ 1.20 ಲಕ್ಷ ರೈತರಿಗೆ ಈಗಾಗಲೇ ಬೆಳೆ ಪರಿಹಾರ ವಿತರಿಸಲಾಗಿದ್ದು, ಬಾಕಿ ಉಳಿದಿರುವ 54 ಸಾವಿರ ರೈತರಿಗೂ ಈ ಸೌಲಭ್ಯ ದೊರೆಯಲು ಅನುಕೂಲವಾಗುವಂತೆ ವಾರದ ಕಾಲಾವಧಿಯಲ್ಲಿ ಆಧಾರ್ ಜೋಡಣೆ ಕಾರ್ಯ ಪೂರ್ಣಗೊಳಿಸು ವಂತೆ ಕಟ್ಟುನಿಟ್ಟಾಗಿ ಸೂಚಿಸಿದರು.

ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಜನ–-ಜಾನುವಾರುಗಳಿಗೆ ಕಲ್ಪಿಸಲಾಗುತ್ತಿರುವ ಕುಡಿವ ನೀರಿನ ಸೌಲಭ್ಯ, ಜಾನುವಾರು ಗಳಿಗೆ ಮೇವಿನ ಸೌಲಭ್ಯ ಸೇರಿದಂತೆ ರೈತರ ಅನುಕೂಲಕ್ಕಾಗಿ ಕೈಗೊಳ್ಳಲಾದ ವಿವಿಧ ಚಟುವಟಿಕೆಗಳ ಬಗ್ಗೆ ಜಿಲ್ಲಾಧಿ ಕಾರಿ ಮುಖ್ಯಮಂತ್ರಿಗೆ ಸೂಕ್ತ ಮಾಹಿತಿ ಒದಗಿಸಿದರು. ವಿಡಿಯೋ ಸಂವಾದದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ್ ಮೊಹಸೀನ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ, ಸಿಇಓ ಎಂ. ಸುಂದ ರೇಶ ಬಾಬು, ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT