ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮರಳು ದಂಧೆ ವಿರುದ್ಧ ಸುಪ್ರೀಂಕೋರ್ಟ್‌ಗೆ ರಿಟ್’

Last Updated 20 ಏಪ್ರಿಲ್ 2017, 5:36 IST
ಅಕ್ಷರ ಗಾತ್ರ

ಯಾದಗಿರಿ: ‘ಜಿಲ್ಲೆಯಲ್ಲಿನ ಕೃಷ್ಣಾ ನದಿಪಾತ್ರದಲ್ಲಿ ನಡೆಯುತ್ತಿರುವ ಅಕ್ರಮ ಮರಳುದಂಧೆ ನಿಯಂತ್ರಿಸಲು ಜಿಲ್ಲಾಧಿಕಾರಿಯ ಕಾರ್ಯ ವೈಖರಿಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ರಿಟ್‌ ಸಲ್ಲಿಸಲಾಗುವುದು’ ಎಂದು ಸಾಮಾಜಿಕ ಕಾರ್ಯಕರ್ತ ಹಣಮಂತಪ್ಪ ಭಂಗಿ ತಿಳಿಸಿದರು.

‘ಜಿಲ್ಲೆಯ ಶಹಾಪುರ ಮತ್ತು ಸುರಪುರ ತಾಲ್ಲೂಕುಗಳಲ್ಲಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ಅಕ್ರಮ ಮರಳು ದಂಧೆಯನ್ನು ಗುತ್ತಿಗೆದಾರರೇ ನಡೆಸುತ್ತಿದ್ದಾರೆ. ಈ ಅಕ್ರಮದಲ್ಲಿ ಸ್ಥಳೀಯ ಪೊಲೀಸ್, ಸಾರಿಗೆ, ಕಂದಾಯ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದಾರೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ಯಂತ್ರಗಳನ್ನು ಬಳಸಿ ಮರಳು ಗಣಿಗಾರಿಕೆ ನಡೆಸುವುದು ನಿಯಮ ಬಾಹಿರ. ನದಿ ಒಡಲಿನ ಮೂರು ಅಡಿಯಷ್ಟು ಆಳದಲ್ಲಿರುವ ಮರಳನ್ನು ತೆದುಕೊಳ್ಳಬೇಕೆಂಬ ಷರತ್ತಿನ ಮೇಲೆ ಗುತ್ತಿಗೆ ನೀಡಲಾಗಿರುತ್ತದೆ. ಆದರೆ, ಗುತ್ತಿಗೆದಾರರು ನಿಯಮ ಮೀರಿ ನದಿ ಒಡಲಿನಲ್ಲಿ ಯಂತ್ರಗಳನ್ನು ಬಳಸಿ ಮರಳು ದಂಧೆ ನಡೆಸುತ್ತಿದ್ದಾರೆ. ಈ ಕುರಿತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ, ಸಾರಿಗೆ ಅಧಿಕಾರಿ, ಕಂದಾಯ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ, ಕ್ರಮ ಕೈಗೊಂಡಿಲ್ಲ. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಿರುವ ಜಿಲ್ಲಾಧಿಕಾರಿ ಖುಷ್ಬೂ ಗೋಯೆಲ್ ಚೌಧರಿ ವಿರುದ್ಧ ಸುಪ್ರೀಂ ಕೋರ್ಟ್‌ ನಲ್ಲಿ ದಾವೆ ಹೂಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT