ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡುಗು ಸಹಿತ ಆಲಿಕಲ್ಲು ಮಳೆ

Last Updated 20 ಏಪ್ರಿಲ್ 2017, 6:56 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದಲ್ಲಿ ಬುಧವಾರ ಸಂಜೆ ಮಿಂಚು, ಗುಡುಗು ಸಹಿತವಾಗಿ ಆಲಿಕಲ್ಲು ಮಳೆಯಾಗಿದೆ. ಸುಮಾರು 45 ನಿಮಿಷಕ್ಕೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿಯಿತು.ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ನಗರದ ಜನತೆಗೆ ಮಳೆಯಿಂದ ಸಂತಸಗೊಂಡಿದ್ದಾರೆ. ಎರಡು ದಿನಗಳಿಂದ ನಗರದಲ್ಲಿ ಉತ್ತಮ ಮಳೆಯಾಗುತ್ತಿದೆ. ಸಂಜೆ ಸುರಿದ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಸಂಚರಿಸಲು ಪರದಾಡುವಂತಾಯಿತು.

ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 209 ಅಭಿವೃದ್ಧಿ ಕಾಮಗಾರಿ ಸೇರಿದಂತೆ ಕೆಲವು ವಾರ್ಡ್‌ಗಳಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಇದರಿಂದಾಗಿ ಚರಂಡಿಗಳಲ್ಲಿ ಮಣ್ಣು ಸಂಗ್ರಹಗೊಂಡಿದೆ. ಮಳೆ ನೀರು ಹೊರಹೋಗಲು ಸಮಸ್ಯೆಯಾಯಿತು. ಚರಂಡಿಯಲ್ಲಿ ಒಂದೆಡೆ ಸಂಗ್ರಹಗೊಂಡಿದ್ದ ಕಲ್ಮಶ ನೀರಿನೊಂದಿಗೆ ಮಳೆ ನೀರು ಬೆರೆತು ರಸ್ತೆಯಲ್ಲಿ ಹರಿಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT