ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಲಿತಾಂಶ ಪ್ರಕಟಣೆ ವಿಳಂಬಕ್ಕೆ ಆಕ್ರೋಶ

Last Updated 20 ಏಪ್ರಿಲ್ 2017, 8:35 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಫಲಿತಾಂಶ ಪ್ರಕಟಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಕೆ.ಎಲ್‌.ಇ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಎ.ಬಿ.ವಿ.ಪಿ ನೇತೃತ್ವದಲ್ಲಿ ನಗರದ ತಹಶೀಲ್ದಾರ್‌ ಕಚೇರಿ ಎದುರು ಬುಧವಾರ ಪ್ರತಿಭಟನೆ ಮಾಡಿದರು.ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಬಳಿಕ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

‘ಕಳೆದ ಡಿಸೆಂಬರ್ ಮತ್ತು ಜನವರಿಯಲ್ಲಿ ನಡೆಸಿದ ಪರೀಕ್ಷೆ ಫಲಿತಾಂಶವನ್ನು ನಾಲ್ಕು ತಿಂಗಳು ಕಳೆದರೂ ಪ್ರಕಟಿಸಿಲ್ಲ. ಇದರಿಂದ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ವಿಶ್ವವಿದ್ಯಾಲಯದ ಕಾರ್ಯವೈಖರಿ ಹದಗೆಟ್ಟಿರುವುದು ಇದರಿಂದ ಸ್ಪಷ್ಟವಾಗಿದೆ. ಫಲಿತಾಂಶ ವಿಳಂಬದಿಂದ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆ ಆಗಲಿದೆ’ ಎಂದು ಎಬಿವಿಪಿ ಮುಖಂಡ ತೇಜಸ ಗೋಕಾಕ ಆರೋಪಿಸಿದರು.

‘ಫಲಿತಾಂಶ ಪ್ರಕಟವಾದ ನಂತರ ಮರುಮೌಲ್ಯಮಾಪನ ಆಗದಂತೆ ವಿಶ್ವವಿದ್ಯಾಲಯ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳು ಅನುಭವಿಸುತ್ತಿರುವ ತೊಂದರೆಯನ್ನು ದೂರ ಮಾಡಬೇಕಾದರೆ ಕೂಡಲೇ ಫಲಿತಾಂಶ ಪ್ರಕಟಿಸಬೇಕು. ವಾರದೊಳಗೆ ಎಲ್ಲ ಸೆಮಿಸ್ಟರ್‌ಗಳ ಫಲಿತಾಂಶ ಪ್ರಕಟಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವ ಜೊತೆಗೆ ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಎಚ್ಚರಿಕೆ ನೀಡಿದರು.ಕಾರ್ಯಕರ್ತರಾದ ಚೇತನ ನಂದಿಹಳ್ಳಿ, ಸಚಿನ ರಾಯಭಾಗಕರ, ಶ್ರವಣ ಹುಣಸಗಿ, ಶಿವುಗೌಡ, ಶ್ರೀನಿವಾಸ, ಸನ್ಮತಿ, ರಿತೇಶ, ಮಹಾಲಕ್ಷ್ಮಿ, ಆರತಿ, ಅನನ್ಯ ಹಾಗೂ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT