ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಎಸ್ಎಲ್‌ಸಿ ಮೌಲ್ಯ ಮಾಪನ: ಕಡ್ಡಾಯ ಹಾಜರಿಗೆ ಸೂಚನೆ

Last Updated 20 ಏಪ್ರಿಲ್ 2017, 8:42 IST
ಅಕ್ಷರ ಗಾತ್ರ

ವಿಜಯಪುರ: ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ನಗರದ 9 ಮೌಲ್ಯಮಾಪನ ಕೇಂದ್ರಗಳಲ್ಲಿ ಇದೇ 20ರಿಂದ ನಡೆ ಯಲಿದ್ದು, ನಿಯೋಜಿತ ಮೌಲ್ಯಮಾ ಪಕರು ಕಡ್ಡಾಯವಾಗಿ ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗುವಂತೆ ಸಾರ್ವ ಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ಕರ್ನಾಟಕ ಶಿಕ್ಷಣ ಕಾಯ್ದೆ 1983ರ ನಿಯಮ 28, 122ರನ್ವಯ ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ತಿದ್ದುಪಡಿ) ನಿಯಮಗಳು–-2012ರಂತೆ ಮೌಲ್ಯಮಾಪನ ಕಾರ್ಯ ಕಡ್ಡಾಯವಾಗಿದ್ದು, ಮೌಲ್ಯಮಾಪನ ಕಾರ್ಯಕ್ಕೆ ಶಿಕ್ಷಕರು ಕಡ್ಡಾಯವಾಗಿ ಹಾಜರಾಗಬೇಕು. ಒಂದು ವೇಳೆ ಗೈರು ಹಾಜರಾದಲ್ಲಿ ಅಂತಹವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ನಿಷೇಧಾಜ್ಞೆ: ಇದೇ 20ರಿಂದ 26ರವರೆಗೆ ನಗರದ 9 ಕೇಂದ್ರಗಳಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ  ಮೌಲ್ಯಮಾಪನ  ನಡೆಯಲಿದ್ದು, ಮೌಲ್ಯಮಾಪನ ನಡೆಯುವ                ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ಬೆಳಿಗ್ಗೆ 9 ರಿಂದ ಮೌಲ್ಯಮಾಪನ ಕಾರ್ಯ ಮುಗಿಯುವ ವರೆಗೆ ಸಿಆರ್‌ಪಿಸಿ ಕಲಂ 144ರ ರನ್ವಯ ನಿಷೇಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT