ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಜೆಪಿಯವರು ಮೂರ್ಖರು’

Last Updated 20 ಏಪ್ರಿಲ್ 2017, 10:06 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಬಿಜೆಪಿಯವರು ಮೂರ್ಖರು. ಅವರಿಗೆ ತಲೆ ಇದೆಯೋ ಇಲ್ಲವೋ ಗೊತ್ತಿಲ್ಲ. ಪ್ರಜಾತಂತ್ರದ ಬಗ್ಗೆ ಅರಿವಿಲ್ಲದೇ ಕಾಂಗ್ರೆಸ್ ಮುಕ್ತ ಕರ್ನಾಟಕ, ಭಾರತ ಮಾಡುವುದಾಗಿ ಹೇಳುತ್ತಿದ್ದಾರೆ. ಅದನ್ನು ಮಾಡಬೇಕಾದವರು ಮತದಾರರು. ಆ ರೀತಿ ಮಾತನಾಡಿದ ಕಾರಣಕ್ಕೇ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಮತದಾರರು ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ವ್ಯಂಗ್ಯವಾಡಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲೈಂಗಿಕ ಹಗರಣದಲ್ಲಿ ಶಾಸಕ ಎಚ್.ವೈ.ಮೇಟಿ ವಿರುದ್ಧ ಯಾರೂ ದೂರು ನೀಡಿರಲಿಲ್ಲ. ಹಾಗಿದ್ದರೂ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಈ ಪ್ರಕರಣದಲ್ಲಿ ಸಿಐಡಿ ಕ್ಲೀನ್‌ ಚಿಟ್ ಕೊಟ್ಟಲ್ಲಿ ಮೇಟಿ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಟ್ಟದ್ದು’ ಎಂದರು.

ಜಾತಿ ಗಣತಿ ವರದಿ: ಮೇ ಅಂತ್ಯದೊಳಗೆ ಜಾತಿ ಗಣತಿ ವರದಿಯನ್ನು ಮಂಡಿಸಲಾಗುವುದು ಎಂದ ಅವರು, ವರದಿ ಬಹಿರಂಗಪಡಿಸದಂತೆ ಯಾರೂ ಒತ್ತಡ ಹಾಕಿಲ್ಲ ಎಂದು ಹೇಳಿದರು.‘ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿ ವಿಚಾರದಲ್ಲಿ ವಿರೋಧ ಮಾಡುತ್ತಿರುವವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಜಾತಿ ಗಣತಿ ವರದಿ ಮಂಡನೆ ನಂತರ ಆಯೋಗದ  ವರದಿ ಜಾರಿಗೂ ಚಾಲನೆ ನೀಡ ಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT