ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಶಿಕ್ಷೆ

Last Updated 21 ಏಪ್ರಿಲ್ 2017, 5:11 IST
ಅಕ್ಷರ ಗಾತ್ರ

ದಾವಣಗೆರೆ: ನಗರದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನಿಗೆ ಇಲ್ಲಿನ2ನೇ ಹೆಚ್ಚುವರಿ ಮತ್ತು ವಿಶೇಷ ಸೆಷನ್ಸ್‌ ನ್ಯಾಯಾಲಯವು ಗುರುವಾರ10 ವರ್ಷ ಕಠಿಣ ಶಿಕ್ಷೆ ಹಾಗೂ₹ 25 ಸಾವಿರ ದಂಡ ವಿಧಿಸಿಆದೇಶ ನೀಡಿದೆ.

ಷಣ್ಮುಖ (21) ಶಿಕ್ಷೆಗೆ ಒಳಗಾದ ಆರೋಪಿ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ತಾಲ್ಲೂಕಿನ ಬಸವನ ಶಿವನಕೆರೆ ಗ್ರಾಮ ಈತನ ಸ್ವಂತ ಊರು. ದಾವಣಗೆರೆಯ ಬಸವಬುದ್ಧ ನಗರದಲ್ಲಿ ವಾಸವಾಗಿದ್ದ.ಎರಡು ವರ್ಷಗಳ ಹಿಂದೆ ಆರೋಪಿ ಈ ಕೃತ್ಯ ಎಸಗಿದ್ದ. ಈ ಸಂಬಂಧ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಶೇಷ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಪ್ರಕರಣದ ವಿಚಾರಣೆ ನಡೆಸಿ, ಅಪಹರಣ ಅಪರಾಧಕ್ಕೆ 5 ವರ್ಷ ಸಾದಾ ಶಿಕ್ಷೆ ಹಾಗೂ ₹15 ಸಾವಿರ ದಂಡ. ಲೈಂಗಿಕ ದೌರ್ಜನ್ಯ ಅಪರಾಧಕ್ಕೆ ಪೋಕ್ಸೊ ಕಾಯ್ದೆ ಅಡಿ 10 ವರ್ಷ ಕಠಿಣ ಶಿಕ್ಷೆ ಹಾಗೂ ₹ 25 ಸಾವಿರ ದಂಡ ವಿಧಿಸಿದ್ದಾರೆ. ದಂಡದ ಒಟ್ಟು ಮೊತ್ತದಲ್ಲಿ ₹ 30 ಸಾವಿರವನ್ನು ಪರಿಹಾರ ರೂಪದಲ್ಲಿ ಸಂತ್ರಸ್ತ ಬಾಲಕಿಗೆ ನೀಡುವಂತೆ ಆದೇಶಿಸಿದ್ದಾರೆ.ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಚ್‌.ಜಿ. ಬಣಕಾರ್‌ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT