ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಕಾಲೇಜಿಗೆ ಶೀಘ್ರ ನಿವೇಶನ: ಮಾಲಕರಡ್ಡಿ

Last Updated 21 ಏಪ್ರಿಲ್ 2017, 5:51 IST
ಅಕ್ಷರ ಗಾತ್ರ

ಯಾದಗಿರಿ:  ‘ಸರ್ಕಾರಿ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣಕ್ಕೆ ನಗರ ದಲ್ಲಿ ಶೀಘ್ರ ಸೂಕ್ತ ನಿವೇಶನ ನೀಡಲಾಗು ವುದು. ಈ ಕುರಿತು ಜಿಲ್ಲಾಧಿಕಾರಿ ಅವ ರೊಂದಿಗೆ ಚರ್ಚೆ ನಡೆಸಿದ್ದೇನೆ’ ಎಂದು  ಶಾಸಕ ಡಾ.ಎ.ಬಿ.ಮಾಲಕರೆಡ್ಡಿ ಹೇಳಿದರುನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಹಮ್ಮಿ ಕೊಂಡಿದ್ದ ಸಾಂಸ್ಕೃತಿಕ, ಕ್ರೀಡಾ, ಎನ್ಎಸ್ಎಸ್ ಶಿಬಿರ ಸಮಾರೋಪ, ಬಿ.ಎ., ಬಿ.ಕಾಂ ವಿದ್ಯಾರ್ಥಿಗಳಿಗೆ ಬೀಳ್ಕೊ ಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಸದ್ಯಮಹಿಳಾ ಕಾಲೇಜಿಗೆ  ತಾತ್ಕಾ ಲಿಕವಾಗಿ ನೂತನ ಪದವಿ ಕಾಲೇಜು ಸಂಕೀರ್ಣ ನೀಡುವಂತೆ ಆದೇಶಿಸಿದ್ದೇನೆ. ಅಲ್ಲಿಗೆ ಮಹಿಳಾ ಕಾಲೇಜನ್ನು ಸ್ಥಳಾಂತರ ಗೊಳಿಸಿಕೊಳ್ಳಿ. ನಂತರ ನಿವೇಶನ ಗುರುತಿಸಿದ ಮೇಲೆ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು’ ಎಂದರು.‘ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮಪಟ್ಟಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ. ಯಾವುದೇ ಮೂಲ ಸೌಲಭ್ಯ ಇಲ್ಲದ ಕಾಲೇಜಿನಲ್ಲಿ ಅಧ್ಯಯನ ಮಾಡುವ ಮೂಲಕ ವಿದ್ಯಾರ್ಥಿನಿಯರು ಶೈಕ್ಷಣಿಕ, ಸ್ಪರ್ಧಾತ್ಮಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅನೇಕ ಬಹುಮಾನ ಗಳಿಸಿದ್ದಾರೆ’ ಎಂದು ಶ್ಲಾಘಿಸಿದರು.

ಬಿ.ಎ. ಅಂತಿಮ ವರ್ಷದ ವಿದ್ಯಾ ರ್ಥಿನಿ ಶಾಂತಮ್ಮ ಮಾತನಾಡಿ, ‘ಕಾಲೇಜಿನಲ್ಲಿ ನೀರು, ಶೌಚಾಲಯ ಸೇರಿದಂತೆ ವಿವಿಧ ಸೌಲಭ್ಯಗಳ ಕೊರತೆ ಇದೆ. ಈ ಕುರಿತು ಅನೇಕ ಬಾರಿ ಜನ ಪ್ರತಿನಿಧಿಗಳ, ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ವಾಗಿಲ್ಲ.ಇಂತಹ ಅವ್ಯವಸ್ಥೆಯಿಂದ ನಮ್ಮೆಲ್ಲರ ಆರೋಗ್ಯ ಹದಗೆಡುತ್ತಿದೆ. ಆದ್ದರಿಂದ ಶಾಸಕರು ಮಹಿಳಾ ಕಾಲೇಜು ಅಭಿ ವೃದ್ಧಿಯತ್ತ ಹೆಚ್ಚಿನ ಗಮನ ನೀಡ ಬೇಕು’ ಎಂದು ಮನವಿ ಮಾಡಿದರು.

ಪ್ರಾಂಶುಪಾಲ ಪ್ರೊ.ಆರ್.ಪಿ.ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.  ಉಪನ್ಯಾಸಕ ಡಾ. ಸರ್ವೋದಯ ಶಿವಪುತ್ರ ಪ್ರಾಸ್ತವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಡಾ. ಅನಸೂಯಾ ಪಾಟೀಲ್ ವಾರ್ಷಿಕ ವರದಿ ಓದಿದರು.ಕಾಲೇಜು ಪ್ರಾಂಶುಪಾಲ ಪ್ರೊ.ಚನ್ನ ಬಸಪ್ಪ ಕುಳಗೇರಿ ಇದ್ದರು.ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಶಾಸಕ ಮಾಲಕರೆಡ್ಡಿ ಪ್ರಶಸ್ತಿಪತ್ರ ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT