ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಗೀರಥ ಜಯಂತಿ: ಸಿದ್ಧತೆಗೆ ಸೂಚನೆ

Last Updated 21 ಏಪ್ರಿಲ್ 2017, 5:58 IST
ಅಕ್ಷರ ಗಾತ್ರ

ಬೀದರ್‌: ನಗರದಲ್ಲಿ ಮೇ 2 ರಂದು ಮಹರ್ಷಿ ಭಗೀರಥ ಜಯಂತಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ  ಅಧಿಕಾರಿಗಳಿಗೆ ಸೂಚಿಸಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ  ಮಹರ್ಷಿ ಭಗೀರಥ ಜಯಂತಿ  ಪೂರ್ವಸಿದ್ಧತಾ ಸಭೆಯಲ್ಲಿ  ಮಾತನಾಡಿದರು.

ಅಂದು ಶಾಲಾ-ಕಾಲೇಜು, ಸರ್ಕಾರಿ ಹಾಗೂ ಅರೆ ಸರ್ಕಾರಿ ಕಚೇರಿಗಳಿಗೆ ದೀಪಾಲಂಕಾರ ಮಾಡಬೇಕು. ಬೆಳಿಗ್ಗೆ 8.30ಕ್ಕೆ ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕುಎಂದು ಹೇಳಿದರು.ಬೆಳಿಗ್ಗೆ 9ಕ್ಕೆ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಮತ್ತು ಗಣ್ಯರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಾಜರಾಗಬೇಕು. ಭಗೀರಥ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ನಡೆಯುವ ಮೆರವಣಿಗೆ ರಂಗಮಂದಿರ ತಲುಪಬೇಕು ಎಂದು ತಿಳಿಸಿದರು.

ಮೆರವಣಿಗೆಗೆ ಕಲಾ ತಂಡಗಳನ್ನು ಆಹ್ವಾನಿಸುವ ವ್ಯವಸ್ಥೆ ಮಾಡಬೇಕು ಎಂದು ಭಗೀರಥ ಸಂಘದ ಮುಖಂಡರು ಮನವಿ ಮಾಡಿದರು. ನಗರಸಭೆಯ ಉಪಾಧ್ಯಕ್ಷೆ ಶಾಲಿನಿ ರಾಜು ಚಿಂತಾಮಣಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಡಿ.ಷಣ್ಮುಖ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT