ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ತಿಂಗಳಲ್ಲಿ ಕಾಮಗಾರಿ ಪೂರ್ಣ

Last Updated 21 ಏಪ್ರಿಲ್ 2017, 7:20 IST
ಅಕ್ಷರ ಗಾತ್ರ

ವಿಜಯಪುರ: ಇಂಡಿ ಭಾಗದ 72 ಹಳ್ಳಿಗಳಿಗೆ ಕುಡಿಯುವ ನೀರು ಪೂರೈ­ಸುವ ಮಹತ್ವಾಕಾಂಕ್ಷೆಯ ಯೋಜನೆ ಇನ್ನೆರೆಡು ತಿಂಗಳಲ್ಲಿ ಅನುಷ್ಠಾನ­ಗೊಳ್ಳಲಿದೆ ಎಂದು ಕೇಂದ್ರ ಕುಡಿಯುವ ನೀರು ಹಾಗೂ ನೈರ್ಮಲ್ಯ ಖಾತೆಯ ರಾಜ್ಯ ಸಚಿವ ರಮೇಶ ಜಿಗಜಿಣಗಿ ತಿಳಿಸಿದರು.ಇಂಡಿ ಭಾಗದ ಕುಡಿಯುವ ನೀರಿನ ಸಮಸ್ಯೆಯನ್ನು ಸಂಪೂರ್ಣವಾಗಿ ಪರಿ­ಹರಿಸುವ ನಿಟ್ಟಿನಲ್ಲಿ ಕುಡಿಯುವ ನೀರಿನ ಯೋಜನೆ ಕಾರ್ಯಗತ­ಗೊಳಿಸಲಾ­ಗುತ್ತಿದೆ. ₹ 105 ಕೋಟಿ ವೆಚ್ಚದಲ್ಲಿ ಯೋಜನೆಯನ್ನು ಅನುಷ್ಠಾನಗೊ­ಳಿಸಲಾಗುತ್ತಿದೆ ಎಂದು ಗುರುವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಈಗಾಗಲೇ ಪೈಪ್‌ಲೈನ್ ಕಾಮ­ಗಾರಿಗಳು ಸಹ ಪ್ರಗತಿಯಲ್ಲಿವೆ. ಇನ್ನೆರೆಡು ತಿಂಗಳಲ್ಲಿ ಈ ಯೋಜನೆ ಪೂರ್ಣಗೊಳ್ಳ­ಲಿದೆ. ಈ ಯೋಜನೆ ಅನುಷ್ಠಾನ­ಗೊಂಡರೆ ಇಂಡಿ ಭಾಗದ 72 ಹಳ್ಳಿಗಳ ಕುಡಿಯುವ ನೀರಿನ ಸಮಸ್ಯೆ ಸಂಪೂರ್ಣ ನಿವಾರಣೆಯಾಗಲಿದೆ ಎಂದರು.ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ 2017–-18ನೇ ವರ್ಷದಲ್ಲಿ ₹ 290 ಕೋಟಿ ಅನುದಾನ ಮೀಸಲಿರಿಸಿದೆ. ಕಳೆದ ವರ್ಷವೂ ಸಹ ಕೇಂದ್ರ ರಾಜ್ಯಕ್ಕೆ ₹ 362 ಕೋಟಿ ಅನುದಾನ ನೀಡಿತ್ತು, ಇದರಲ್ಲಿ ರಾಜ್ಯ ಕೇವಲ ₹ 209 ಕೋಟಿ ಮಾತ್ರ ಖರ್ಚು ಮಾಡಿದ್ದು, ಉಳಿದ ಅನುದಾನ ರಾಜ್ಯ ಸರ್ಕಾರದ ಬಳಿಯೇ ಉಳಿದಿದೆ ಎಂದು ಮಾಹಿತಿ ನೀಡಿದರು.

1.89 ಕೋಟಿ ಶೌಚಾಲಯ ನಿರ್ಮಾಣ:
ಸ್ವಚ್ಛ ಭಾರತ ಯೋಜನೆಯಡಿ ದೇಶ­ದಾದ್ಯಂತ 1.89 ಕೋಟಿ ಶೌಚಾಲಯ­ಗಳನ್ನು ನಿರ್ಮಿಸಲಾಗಿದೆ. 129 ಜಿಲ್ಲೆಗಳನ್ನು ಬಯಲು ಶೌಚಾಲಯ ಮುಕ್ತ ಜಿಲ್ಲೆಗಳನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಜಿಗಜಿಣಗಿ ಹೇಳಿದರು.

ಕೇರಳ, ಹಿಮಾಚಲ ಪ್ರದೇಶ, ಸಿಕ್ಕಿಂ, ಉತ್ತರಾಖಂಡ್, ಗುಜರಾತ್ ರಾಜ್ಯಗ­ಳನ್ನು ಬಯಲು ಶೌಚಮುಕ್ತ ರಾಜ್ಯಗ­ಳನ್ನಾಗಿ ಘೋಷಣೆ ಮಾಡಲಾಗಿದೆ. ರಾಜ್ಯದ ಐದು ಜಿಲ್ಲೆಗಳಾದ ಬೆಂಗ­ಳೂರು, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ಮಡಿಕೇರಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಬಯಲು ಶೌಚಾಲಯ ಮುಕ್ತ ಜಿಲ್ಲೆಗಳನ್ನಾಗಿ ಘೋಷಣೆ ಮಾಡಲಾಗಿದೆ.

ಇನ್ನೂ ಬಿಹಾರ, ಜಮ್ಮು-ಕಾಶ್ಮೀರ, ತೆಲಂಗಾಣ, ಓಡಿಶಾ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ಯೋಜನೆ ಪ್ರಗತಿ ಕಂಡಿಲ್ಲ. ಅಲ್ಲಿಯೂ ಸಹ ಪರಿಣಾ­ಮಕಾರಿಯಾಗಿ ಯೋಜನೆ ಅನುಷ್ಠಾನ­ಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT