ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಸಂಸ್ಥೆಯ ಅಂಗಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಭಾರತ

Last Updated 21 ಏಪ್ರಿಲ್ 2017, 11:14 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ಭಾರತ ಹಾಗೂ ಇತರೆ 12 ಸದಸ್ಯರು ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ(ECOSOC) ಅಂಗಸಂಸ್ಥೆ   ಕಾರ್ಯಕ್ರಮ ಮತ್ತು ಸಮನ್ವಯ ಸಮಿತಿ(ಸಿಪಿಸಿ)ಗೆ ಆಯ್ಕೆಯಾಗಿವೆ.

ಸಾಮಾಜಿಕ ಮತ್ತು ಆರ್ಥಿಕ ವಿಷಯಗಳಿಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುವ ವಿಶ್ವಸಂಸ್ಥೆಯ ಅಂಗಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಭಾರತ ಅತ್ಯಧಿಕ ಮತಗಳೊಂದಿಗೆ ಆಯ್ಕೆಯಾಗಿದೆ.

ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯ 50 ಸದಸ್ಯರ ಪೈಕಿ 49 ಸದಸ್ಯರ ಮತ ಪಡೆಯುವ ಮೂಲಕ ಭಾರತ ಕಾರ್ಯಕ್ರಮ ಮತ್ತು ಸಮನ್ವಯ ಸಮಿತಿಯಲ್ಲಿ ಸ್ಥಾನ ಪಡೆದಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ ಸೈಯದ್‌ ಅಕ್ಬರುದ್ದೀನ್‌ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT