ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡುಗು ಸಹಿತ ಮಳೆ ಅಬ್ಬರ

Last Updated 21 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ನಗರ ಹಾಗೂ ಸುತ್ತಮುತ್ತ ಭಾಗದಲ್ಲಿ ಶುಕ್ರವಾರ ಮಧ್ಯಾಹ್ನ ಅರ್ಧ ಗಂಟೆ ಗುಡುಗು, ಸಿಡಿಲು ಸಹಿತ ಬಿರುಸಿನ ಮಳೆ ಸುರಿಯಿತು.

ಮಧ್ಯಾಹ್ನ ಸುಮಾರು 1.40ಕ್ಕೆ ಆರಂಭವಾದ ಮಳೆ ಮಧ್ಯಾಹ್ನ 2.10ರವರೆಗೂ ಆರ್ಭಟಿಸಿತು. ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇತ್ತು. ಮಳೆಯ ಅಬ್ಬರಕ್ಕೆ ರಸ್ತೆ ತುಂಬಾ ಕ್ಷಣ ಮಾತ್ರದಲ್ಲಿ ಮಳೆ ನೀರು ಹರಿಯಿತು. ಬಿಸಿಲ ಝಳಕ್ಕೆ ಕಾದಿದ್ದ ನೆಲವೂ ಮಳೆಗೆ ಕೊಂಚ ತಂಪಾಗಿದೆ.

ಸಿಡಿಲು ಬಡಿದು 17 ಕುರಿಗಳ ಸಾವು: ಶಿಡ್ಲಘಟ್ಟದ ತಲಕಾಯಲಬೆಟ್ಟ ಪಂಚಾಯಿತಿ ವ್ಯಾಪ್ತಿಯ ಜಿ.ನಕ್ಕಲಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನರಸಿಂಹಪ್ಪ ಅವರಿಗೆ ಸೇರಿದ 17 ಕುರಿಗಳು ಸಿಡಿಲು ಬಡಿದು ಮೃತಪಟ್ಟಿವೆ.

ಹಾಸನದಲ್ಲಿ 1 ಸೆಂ.ಮೀ. ಮಳೆ: ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ  ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ.

ಹಾಸನ ಜಿಲ್ಲೆಯ ಕೋಣನೂರು, ಚಾಮರಾಜನಗರದಲ್ಲಿ 1 ಸೆಂ.ಮೀ. ಮಳೆಯಾಗಿದೆ.

ಕಲಬುರ್ಗಿಯಲ್ಲಿ 43.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದಲ್ಲಿನ ಗರಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಆಗಿಲ್ಲ.

ಹವಾಮಾನ ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT