ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಟೀ ಮಾರಿದ್ದ ವಡನಗರ ರೈಲು ನಿಲ್ದಾಣದ ಅಭಿವೃದ್ಧಿಗೆ ₹ 8 ಕೋಟಿ

Last Updated 22 ಏಪ್ರಿಲ್ 2017, 13:53 IST
ಅಕ್ಷರ ಗಾತ್ರ
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಬಾಲ್ಯದಲ್ಲಿ ಟೀ ಮಾರಿದ್ದ ಸ್ಥಳವಾದ ಗುಜರಾತಿನ ಮೆಹಸಾನ ಜಿಲ್ಲೆಯಲ್ಲಿರುವ ವಡನಗರ ರೈಲು ನಿಲ್ದಾಣದ ಅಭಿವೃದ್ಧಿಗೆ ₹ 8 ಕೋಟಿ ಮಂಜೂರು ಮಾಡಲಾಗಿದೆ ಎಂದು ರೈಲ್ವೆ ರಾಜ್ಯ ಸಚಿವ ಮನೋಜ್ ಸಿನ್ಹಾ ಹೇಳಿದ್ದಾರೆ. 
 
ಮೋದಿ ಅವರ ಹುಟ್ಟೂರು ಕೂಡಾ ವಡನಗರ. ಅವರು ಬಾಲ್ಯದಲ್ಲಿ ತಮ್ಮ ತಂದೆಯೊಂದಿಗೆ ಇದೇ ರೈಲು ನಿಲ್ದಾಣದಲ್ಲಿ ಟೀ ಮಾರುತ್ತಿದ್ದರು ಎನ್ನಲಾಗಿದೆ.
 
2014ರ ಲೋಕಸಭಾ ಚುನಾವಣೆ ವೇಳೆ ಮೋದಿ ಅವರು ತಮ್ಮ ತಂದೆ ಜತೆಗೆ ಇಲ್ಲಿ ಟೀ ಮಾರುತ್ತಿದ್ದುದಾಗಿ ಹೇಳಿಕೊಂಡಿದ್ದರು.
 
ವಡನಗರ ರೈಲು ನಿಲ್ದಾಣ ಸೇರಿದಂತೆ ಮೆಹಸಾನ ಜಿಲ್ಲೆಯಲ್ಲಿ ಒಟ್ಟು ₹ 100 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುವುದು ಎಂದು ಅಹಮದಾಬಾದ್‌ನ ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಆರ್‌ಎಂ) ದಿನೇಶ್ ಕುಮಾರ್ ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT