ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಮರಳುಗಾರಿಕೆ; ನಿಯಂತ್ರಣಕ್ಕೆ ಡಿ.ಸಿ ಸೂಚನೆ

Last Updated 23 ಏಪ್ರಿಲ್ 2017, 10:18 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ  ಅಕ್ರಮ ಮರಳುಗಾರಿಕೆ ತಡೆಯುವ ನಿಟ್ಟಿನಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಿಚರ್ಡ್‌ ವಿನ್ಸೆಂಟ್‌ ಡಿಸೋಜ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಕಂದಾಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಕಂದಾಯ ಇಲಾಖೆ ಮತ್ತು ಗಣಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ಮಾಡಿ ಜಿಲ್ಲೆಯಲ್ಲಿ ಕೂಡಲೇ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.

ಜಿಲ್ಲೆಯಲ್ಲಿನ ವಿವಿಧ ಭಾಗಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ತುರ್ತಾಗಿ ಜಾಗ ಮಂಜೂರು ಮಾಡಿ ಕಟ್ಟಡ ನಿರ್ಮಾಣಕ್ಕೆ ಶೀಘ್ರವಾಗಿ ಚಾಲನೆ ನೀಡಬೇಕು. ಪಾಲಿಬೆಟ್ಟದಲ್ಲಿ ಹಾಸ್ಟೆಲ್‌ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳಿ ಎಂದರು.ಮಡಿಕೇರಿಯಲ್ಲಿ ಪೌರ ಕಾರ್ಮಿಕರಿಗೆ ಸೂಕ್ತ ವಸತಿ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಿ. ಗ್ರಾಮ ಪಮಚಾಯಿತಿ ಮಟ್ಟದಲ್ಲಿ ಅರ್ಹ ಫಲಾನುಭವಿಗಳಿಗೆ ಸೂಕ್ತ ಸ್ಥಳದಲ್ಲಿ ಮನೆ ನಿರ್ಮಿಸಲು ನಿವೇಶನ ಮಂಜೂರು ಮಾಡಿಕೊಡಿ. ಸಂಬಂಧಪಟ್ಟ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವಂತಹ ಸಮಸ್ಯೆಗಳನ್ನು ಅಲ್ಲಿಯೇ ತುರ್ತಾಗಿ ಬಗೆಹರಿಸಬೇಕು.

ಅನಗತ್ಯ ವಿಳಂಬವಾಗದಂತೆ ನೋಡಿಕೊಳ್ಳಿ. ಪಂಚಾಯಿತಿ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಮಂಜೂರು ಮಾಡುವ ಸಮಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶಕುಮಾರ್, ಕಸ ವಿಲೇವಾರಿ ಸಮಸ್ಯೆಯನ್ನು ಸಭೆಯಲ್ಲಿ ಪ್ರಸ್ತಾಪಿಸಿ ಸಂಬಂಧಪಟ್ಟ ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸೂಕ್ತ ಸ್ಥಳವನ್ನು ಗುರುತಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.

ತೋಟಗಾರಿಕೆ ಇಲಾಖೆ ಅಧಿಕಾರಿ ಬಿ.ಆರ್. ಗಿರೀಶ್ ಮಾತನಾಡಿ, ಬೇಸಿಗೆ ಮಳೆಯಿಂದ ಕಾಳು ಮೆಣಸು, ಕಿತ್ತಳೆ ಬೆಳೆಗಳಿಗೆ ಉಪಯೋಗವಾಗಿದೆ ಎಂದರು.ಇದಕ್ಕೆ ಜಿಲ್ಲಾಧಿಕಾರಿ ಅವರು ತೋಟಗಾರಿಕೆ ಸಸ್ಯ ಕ್ಷೇತ್ರಗಳ ಒತ್ತುವರಿಯಾದ ಜಾಗವನ್ನು ತೆರವುಗೊಳಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ನಂಜುಂಡೇಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT