ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಸರ ಕಾಳಜಿ ಮರೆಯದಿರಿ

Last Updated 23 ಏಪ್ರಿಲ್ 2017, 10:25 IST
ಅಕ್ಷರ ಗಾತ್ರ

ಮಂಡ್ಯ: ಒತ್ತಡದ ಜೀವನದಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡುವುದನ್ನು ಮರೆಯುತ್ತಿದ್ದೇವೆ. ಅದು ಹೀಗೆ ಮುಂದುವರೆದರೆ ಭವಿಷ್ಯದಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯಕುಮಾರಿ ಆತಂಕ ವ್ಯಕ್ತಪಡಿಸಿದರು.ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ವತಿಯಿಂದ ಶನಿವಾರ ನಡೆದ ‘ವಿಶ್ವ ಭೂ ದಿನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾಡು ನಾಶ ಮಾಡುವ ಮನೋಭಾವ ಸಲ್ಲದು. ಪ್ರತಿಯೊಬ್ಬರೂ ಸಸಿನೆಟ್ಟು ಪೋಷಿಸುವ ಜವಾಬ್ದಾರಿ ಹೊರಬೇಕು. ಆಗ ಪರಿಸರದ ಉಳಿವು ಸಾಧ್ಯ ಆಗುತ್ತದೆ.ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆ ನಿಟ್ಟಿನಲ್ಲಿ ಸಾಗಬೇಕು ಎಂದು ಸಲಹೆ ನೀಡಿದರು.

ಪರಿಸರ ಸಂರಕ್ಷಣೆ ಮಾಡುವ ಕಾರ್ಯಕ್ರಮಗಳ ಬಗ್ಗೆ ವಿವಿಧ ಇಲಾಖಾ ಮಟ್ಟದಲ್ಲಿ ಹಾಗೂ ಸಂಘ–ಸಂಸ್ಥೆಗಳಲ್ಲಿ ಅರಿವು ಮೂಡಿಸುವುದು ಅಗತ್ಯ ಇದೆ. ಪರಿಸರ ಸಂರಕ್ಷಣೆ ಮಾಡಿದರೆ ಮನುಷ್ಯರಿಗೆ ಉಸಿರಾಡಲು ಉತ್ತಮ ಗಾಳಿ ಸಿಗುತ್ತದೆ. ಇದರಿಂದ  ಹವಾಮಾನ ವೈಪರೀತ್ಯದಿಂದ ಮುಕ್ತಿ ಪಡೆಯಲು ಸಹಕಾರಿ ಆಗಲಿದೆ ಎಂದು ತಿಳಿಸಿದರು.
ನ್ಯಾಯಧೀಶರಾದ ರೇಣುಕಾದೇವಿ, ಮನ್ಸೂರ್‌ ಅಹಮದ್‌ ಜಮಾನ್‌, ದಿನೇಶ್‌, ಪಲ್ಲವಿ, ವಕೀಲರ ಸಂಘದ ಅಧ್ಯಕ್ಷ ಮರೀಗೌಡ, ವಕೀಲ ಗುರುಪ್ರಸಾದ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT