ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ನಿರ್ಮೂಲನೆಗೆ ಕೇಂದ್ರದಿಂದ ಕಠಿಣ ಕ್ರಮ

Last Updated 23 ಏಪ್ರಿಲ್ 2017, 10:29 IST
ಅಕ್ಷರ ಗಾತ್ರ

ಮಂಡ್ಯ: ಕಪ್ಪುಹಣ ಸಂಗ್ರಹಕ್ಕೆ ಕಡಿವಾಣ, ಭ್ರಷ್ಟಾಚಾರ ನಿರ್ಮೂಲನೆ, ಸಾರ್ವಜನಿಕರ ಆಸ್ತಿ ರಕ್ಷಣೆಗೆ ಕೇಂದ್ರ ಸರ್ಕಾರ ಕಠಿಣ ನಿರ್ಧಾರ ತೆಗೆದುಕೊಂಡಿದೆ ಎಂದು ಕೇಂದ್ರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.ನಗರದ ಬ್ರಾಹ್ಮಣ ಸಭಾದಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಶನಿವಾರ ನಡೆದ ಜಿಲ್ಲಾ ವಿಶೇಷ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಾವಧಿ ಜನರ ಮೆಚ್ಚುಗೆ ಗಳಿಸಿದೆ. ಕಳೆದ ಮೂರು ವರ್ಷದಲ್ಲಿ ದೇಶದ ರಾಜಕೀಯ ಚಿತ್ರಣ ಬದಲಾಗಿದೆ. ದೇಶದ ಅಭಿವೃದ್ಧಿ ಜತೆಗೆ ಆರ್ಥಿಕ ಶಿಸ್ತು ಕಾಣುತ್ತಿದೆ. ದೇಶವನ್ನು ಅಭಿವೃದ್ಧಿಯತ್ತ ತೆಗೆದುಕೊಂಡು ಹೋಗುವುದೇ ಬಿಜೆಪಿಯ ಧ್ಯೇಯ ಎಂದರು.ಅಧಿಕಾರದ ಆಸೆ ರಾಜಕೀಯದಲ್ಲಿ ಹೆಚ್ಚಾಗುತ್ತಿರುವುದು ದುರಂತ. ದೇಶದ ಅಭಿವೃದ್ಧಿ ಯೋಜನೆಗೆ ಯೋಚನೆ ಮಾಡುವ ಮನಸುಗಳು ಬೇಕು. ಭ್ರಷ್ಟಾಚಾರ ನಿರ್ಮೂಲನೆಗೆ ಕೇಂದ್ರ ಸರ್ಕಾರವು ಕಠಿಣ ನಿಲುವು ತಾಳಿರುವುದರಿಂದ ಜನರಿಗೆ ಅಲ್ಪ ತೊಂದರೆ ಆಗುತ್ತಿದೆ. ಅದನ್ನು ಸಹಿಸಿಕೊಂಡರೆ ಮುಂದಿನ ದಿನಗಳಲ್ಲಿ ಒಳಿತಾಗಲಿದೆ ಎಂದು ಹೇಳಿದರು.

ಕಾಶ್ಮೀರದಲ್ಲಿ ಬಿಜೆಪಿ, ಪಿಡಿಪಿ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿವೆ. ಮಣಿಪುರ, ಅಸ್ಸಾಂ, ಉತ್ತರ ಪ್ರದೇಶದಲ್ಲಿಯೂ ಬಿಜೆಪಿ ಆಡಳಿತ ನಡೆಸುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ವ್ಯಂಗ್ಯವಾಡುತ್ತಿದ್ದವರಿಗೆ ಬಿಜೆಪಿ ತನ್ನ ಶಕ್ತಿ ತೋರಿಸಿದೆ. ರಾಜ್ಯದಲ್ಲಿಯೂ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಲಕ್ಷ್ಯದಿಂದಾದಿ ರಾಜ್ಯದ  ಅಭಿವೃದ್ಧಿ ಶೂನ್ಯ ಆಗಿದೆ. ರೈತರ ಕಷ್ಟಗಳನ್ನು ಅರಿಯುವಲ್ಲಿ ಸೋತಿದ್ದಾರೆ ಎಂದು ಟೀಕಿಸಿದರು. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಸೋಮಶೇಖರ್‌, ಮುಖಂಡರಾದ ಎಚ್‌.ಹೊನ್ನಪ್ಪ, ಕೆ.ನಾಗಣ್ಣಗೌಡ, ಅನುರಾಧಾ ರಘು, ಅಶೋಕ್‌, ಮಲ್ಲಿಕಾರ್ಜುನ್‌, ಬಲರಾಂ, ಪಾರ್ಥಸಾರಥಿ, ಫನೀಪ್‌, ನಾಗೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT