ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಿಎಸ್‌ಟಿಯಿಂದ ಆರ್ಥಿಕ ಪ್ರಗತಿ’

Last Updated 23 ಏಪ್ರಿಲ್ 2017, 20:40 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಉದ್ದೇಶಿತ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ)  ಭಾರತದ ಆರ್ಥಿಕ ಪ್ರಗತಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ.

ನೋಟು ರದ್ದತಿಯು ದೇಶದಲ್ಲಿ ನಕಲಿ ನೋಟುಗಳ ಹಾವಳಿಗೆ ಮತ್ತು ತೆರಿಗೆ ವಂಚನೆಗೆ ಕಡಿವಾಣ ಹಾಕಲಿದೆ ಎಂದರು. ಅಂತರರಾಷ್ಟ್ರೀಯ ಹಣಕಾಸು ಮತ್ತು ಆರ್ಥಿಕ ಸಮಿತಿಯ ಬೇಸಿಗೆ ಸಭೆಯಲ್ಲಿ ಅವರು ಮಾತನಾಡಿದರು.

ಅಸಮಾಧಾನ:  ಕೋಟಾ ಪರಿಶೀಲನೆ  ಮತ್ತು ಸುಧಾರಣೆಗೆ ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಅನುಸರಿಸುತ್ತಿರುವ ವಿಳಂಬ ನೀತಿ ಅದರ ವಿಶ್ವಾಸಾರ್ಹತೆಗೆ ಧಕ್ಕೆ ತರುತ್ತಿದೆ ಎಂದು ಜೇಟ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಜಾಗತಿಕ ಹಣಕಾಸು ಮತ್ತು ಆರ್ಥಿಕ ವ್ಯವಸ್ಥೆಯಲ್ಲಿ ಹೆಚ್ಚುತ್ತಿರುವ ಅಪಾಯಗಳನ್ನು ಗುರುತಿಸಿ ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ನಿಟ್ಟಿನಲ್ಲಿ 
ಅಂತರರಾಷ್ಟ್ರೀಯ ಹಣಕಾಸು ನಿಧಿ ಮುಂದಾಗಬೇಕಿದೆ ಎಂದು ಅವರು ಸಲಹೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT