ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಗಿಗಳಿಗೆ ನೆಲದ ಮೇಲೆಯೇ ಚಿಕಿತ್ಸೆ!

Last Updated 24 ಏಪ್ರಿಲ್ 2017, 5:56 IST
ಅಕ್ಷರ ಗಾತ್ರ

ಕೆಂಭಾವಿ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೌಲಭ್ಯ­ಗಳು ಇಲ್ಲದೆ ಜನ ಕೊರಗುವಂತಹ ಸ್ಥಿತಿ ನಿರ್ಮಾಣವಾಗಿದೆ.

ಸಮುದಾಯ ಆರೋಗ್ಯ ಕೇಂದಕ್ಕೆ ಬರುವ ಬಡ ರೋಗಿಗಳು ಪರದಾಡು­ವಂತಾಗಿದೆ. 1963ರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಯಾಗಿದೆ. 1995ರಲ್ಲೇ ಸಮುದಾಯ ಆರೋಗ್ಯ ಕೇಂದ್ರವ ಎಂದು ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಇದುವರೆಗೂ ಪ್ರಾಥಮಿಕ ಆರೋಗ್ಯ ಕೇಂದ್ರವಾಗಿಯೇ ಮುಂದುವರಿದಿದೆ. 

ಕಳೆದ ವರ್ಷ ಶಾಸಕ ಮತ್ತು ಜಿಲ್ಲಾಧಿಕಾರಿ ನಾಮಫಲಕ ಉದ್ಘಾಟಿಸಿದರು. ಆದರೆ, ಯಾವುದೇ ಸೌಲಭ್ಯಗಳನ್ನು ಒದಗಿಸಿಲ್ಲ. ಪಟ್ಟಣದಲ್ಲಿ 30 ಸಾವಿರ ಜನಸಂಖ್ಯೆ ಇದೆ. ನಿತ್ಯ 250ಕ್ಕೂ ಹೆಚ್ಚು ಹೊರರೋಗಿಗಳು ಇಲ್ಲಿ ಚಿಕಿತ್ಸೆಗೆ ಬರುತ್ತಾರೆ. ಜತೆಗೆ ಪ್ರತಿತಿಂಗಳು ಇಲ್ಲಿ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ನಡೆಸ­ಲಾಗುತ್ತಿದೆ. ನೂರಾರು ಮಹಿಳೆ ಯರು ಶಸ್ತ್ರಚಿಕಿತ್ಸೆಗೆ ಒಳಪಡುತ್ತಾರೆ. ಆದರೆ, ಸರಿಯಾದ ಹಾಸಿಗೆ ಇಲ್ಲದ ಕಾರಣ ಅನಿವಾರ್ಯವಾಗಿ ರೋಗಿಗಳು ನೆಲದ ಮೇಲೆ ಮಲಗಬೇಕಾದ ಸ್ಥಿತಿ ಇದೆ.

ಸಮುದಾಯ ಆರೋಗ್ಯ ಕೇಂದ್ರದಲ್ಲಿ 6 ವೈದ್ಯರು, 2 ಲ್ಯಾಬ್ ಟೆಕ್ನಿಷಿಯನ್, 4 ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, 14 ನರ್ಸ್‌, 12 ಸಿಪಾ ಯಿಗಳ ಅವಶ್ಯವಿದೆ. ಆದರೆ, ಆರೋಗ್ಯ ಕೇಂದ್ರದಲ್ಲಿ ಕೇವಲ ಒಬ್ಬ ಆಡಳಿತ ವೈದ್ಯಾಧಿಕಾರಿ, 3 ನರ್ಸಗಳು, 4 ಸಿಪಾ ಯಿಗಳು ಕಾರ್ಯನಿರ್ವ ಹಿಸುತ್ತಿದ್ದಾರೆ.

ಮೇಲ್ದರ್ಜೆಗೇರಿದ ಹಲವು ಆಸ್ಪತ್ರೆಗಳು ಈಗ ಎಲ್ಲ ಸೌಲಭ್ಯಗಳನ್ನು ಹೊಂದಿವೆ. ಆದರೆ, ಈ ಆಸ್ಪತ್ರೆ ಮಾತ್ರ ಪ್ರಾಥಮಿಕ ಆರೋಗ್ಯ ಕೇಂದ್ರವಾಗಿಯೇ ಮುಂದುವರಿದಿದೆ.

‘ತಿಂಗಳಿಗೆ 50ಕ್ಕಿಂತ ಹೆಚ್ಚು ಹೆರಿಗೆ ಯಾಗುವ ಆಸ್ಪತ್ರೆಗಳಿಗೆ ಒಬ್ಬರು ಮಹಿಳಾ ವೈದ್ಯರು ಕಡ್ಡಾಯವಾಗಿ ಇರಬೇಕು ಎಂಬ ಕಾನೂನು ಇದೆ. ಆರೆ, ಇಲ್ಲಿ ಇದನ್ನು ಕಡೆಗಣಿಸಲಾಗಿದೆ. ಆರೋಗ್ಯ ಕೇಂದ್ರದಲ್ಲಿಯೇ ಸಿಬ್ಬಂದಿ ಕೊರತೆಯಿದೆ. ಆದರೂ ಇಲ್ಲಿನ ಸಿಬ್ಬಂದಿಯನ್ನು ಬೆರೆಡೆಗೆ ನಿಯೋಜಿಸಲಾಗುತ್ತಿದೆ’ ಎಂದು ಸ್ಥಳೀಯರಾದ ಮಶಾಕಸಾಬ ಸಾಸನೂರ ಆರೋಪಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT