ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಪಿಎಂಸಿ ಏಕಸ್ವಾಮ್ಯಕ್ಕೆ ಕಡಿವಾಣ

Last Updated 24 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ಏಕಸ್ವಾಮ್ಯಕ್ಕೆ ಅಂತ್ಯ ಹಾಡಿ, ರೈತರಿಗೆ ತಾವು ಬೆಳೆದ ಬೆಳೆಗಳನ್ನು ರಾಜ್ಯದ ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವಕಾಶ ಕಲ್ಪಿಸುವ ಕರಡು ಕಾನೂನನ್ನು ಕೇಂದ್ರ ಕೃಷಿ ಸಚಿವಾಲಯ ಸಿದ್ಧಪಡಿಸಿದೆ.

ಸಚಿವಾಲಯ ರೂಪಿಸಿರುವ ‘ಕೃಷಿ ಉತ್ಪನ್ನ ಮತ್ತು ಜಾನುವಾರು ಮಾರುಕಟ್ಟೆ (ಉತ್ತೇಜನ ಮತ್ತು ಸಹಕಾರ) ಕಾಯ್ದೆ’ಯು ಖಾಸಗಿಯವರಿಗೆ ಸಗಟು ಮಾರುಕಟ್ಟೆಗಳನ್ನು ಸ್ಥಾಪಿಸಲು ಅವಕಾಶ ನೀಡುತ್ತದೆ. ಇದರಿಂದ ರೈತರಿಗೆ ನೆರವಾಗಲಿದೆ ಎಂದು ಹೇಳಲಾಗುತ್ತಿದೆ. ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಲು ಹತ್ತಿರದಲ್ಲೇ ಅವರಿಗೆ ಮಾರುಕಟ್ಟೆಗಳು ಲಭ್ಯವಾಗಲಿದೆ.

‘ಸದ್ಯ, ಪ್ರತಿ 462 ಚದರ ಕಿ.ಮೀ ವ್ಯಾಪ್ತಿಯಲ್ಲಿ ಒಂದು ವ್ಯವಸ್ಥಿತ ಮಾರುಕಟ್ಟೆ ಇದೆ. ಈ ಕಾನೂನು ಜಾರಿಗೆ ಬಂದರೆ, ಕನಿಷ್ಠ 80 ಚದರ ಕಿ.ಮೀ ವ್ಯಾಪ್ತಿಯಲ್ಲಿ ಮಾರುಕಟ್ಟೆಗಳು ಲಭ್ಯವಿರಲಿದೆ’ ಎಂದು ಕೃಷಿ ಸಚಿವ ರಾಧಾಮೋಹನ್‌ ಸಿಂಗ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT