ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯಕ್ರಮದಲ್ಲಿ ಮೂಲಭೂತ ಕರ್ತವ್ಯ ಪಾಠ ಸೇರ್ಪಡೆ

Last Updated 24 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಒಂದರಿಂದ ಹತ್ತನೇ ತರಗತಿ ವರೆಗಿನ ಪಠ್ಯಕ್ರಮದಲ್ಲಿ ಮೂಲಭೂತ ಕರ್ತವ್ಯಗಳನ್ನು ಸೇರ್ಪಡೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ನ್ಯಾಯಮೂರ್ತಿ ಎ.ಎನ್‌.ವೇಣುಗೋಪಾಲಗೌಡ ಅವರಿದ್ದ  ಏಕಸದಸ್ಯ ಪೀಠಕ್ಕೆ ಈ ಸಂಬಂಧ ಹೆಚ್ಚುವರಿ ಅಡ್ವೊಕೇಟ್ ಜನರಲ್‌ ಎ.ಜಿ.ಶಿವಣ್ಣ ವಿವರ ಸಲ್ಲಿಸಿದರು.

ಸದ್ಯ ಚಾಲ್ತಿಯಲ್ಲಿರುವ ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳಲ್ಲಿ ಪರಿಸರ, ನೈಸರ್ಗಿಕ ಸಂಪನ್ಮೂಲಗಳು, ಸಾರ್ವಜನಿಕರ ಆಸ್ತಿ ರಕ್ಷಣೆ, ಮೂಲಭೂತ  ಹಕ್ಕುಗಳು ಹಾಗೂ ಕರ್ತವ್ಯಗಳ ನ್ನು ಒಳಗೊಂಡ ಅಂಶಗಳಿರುವ ಪಾಠಗಳ ಸೇರ್ಪಡೆ ವಿವರವನ್ನು ಶಿವಣ್ಣ ನ್ಯಾಯಮೂರ್ತಿಗಳಿಗೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT