ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್‌ ಹುದ್ದೆ ಭರ್ತಿ: ‘ಸುಪ್ರೀಂ’ ಮೆಚ್ಚುಗೆ

Last Updated 24 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಗೃಹ ಇಲಾಖೆಯಲ್ಲಿ ಖಾಲಿ ಇರುವ ಅಂದಾಜು 24,000 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾರ್ಗಸೂಚಿ ಸಿದ್ಧಪಡಿಸಿರುವ ಕರ್ನಾಟಕದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ಮೆಚ್ಚುಗೆ ವ್ಯಕ್ತಪಡಿಸಿತು.

ಪ್ರಸಕ್ತ ಜುಲೈ ಅಂತ್ಯದೊಳಗೆ ರಾಜ್ಯ ಸರ್ಕಾರವು 725 ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆ ಹಾಗೂ 8,400 ಪೊಲೀಸ್‌ ಕಾನ್‌ಸ್ಟೆಬಲ್‌ ಹುದ್ದೆಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಳಿಸಲಿದೆ. 2018–19ನೇ ಸಾಲಿನಲ್ಲಿ ಸರ್ಕಾರ 942 ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆ ಹಾಗೂ 12,139 ಕಾನ್‌ಸ್ಟೆಬಲ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ ಎಂದು ಎಡಿಜಿಪಿ (ನೇಮಕಾತಿ) ರಾಘವೇಂದ್ರ ಔರಾದಕರ್‌ ಹಾಗೂ  ಸರ್ಕಾರದ ಪರ ವಕೀಲ ವಿ.ಎನ್‌. ರಘುಪತಿ ಅವರು ಮುಖ್ಯ ನ್ಯಾಯಮೂರ್ತಿ ಜೆ.ಎಸ್‌. ಖೇಹರ್‌ ಹಾಗೂ ಡಿ.ವೈ. ಚಂದ್ರಚೂಡ್‌ ಅವರನ್ನು ಒಳಗೊಂಡ ಪೀಠಕ್ಕೆ ವಿವರಿಸಿದರು.

‘ನೇಮಕಾತಿಗೆ ಸಂಬಂಧಿಸಿದ ಮಾರ್ಗಸೂಚಿ ಸಿದ್ಧಪಡಿಸುವಲ್ಲಿ ನೀವು ಉತ್ತಮ ಕೆಲಸ ಮಾಡಿದ್ದೀರಿ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಪೀಠವು, ‘ಖಾಲಿ ಹುದ್ದೆಗಳ ಭರ್ತಿಯು ಎಡಿಜಿಪಿ ಅವರ ಜವಾಬ್ದಾರಿಯಾಗಿದೆ’ ಎಂದು ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT