ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಡಿಜಿಪಿ ಮರುನೇಮಕಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

Last Updated 24 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ/ತಿರುವನಂತಪುರ : ಪೊಲೀಸ್‌ ಮಹಾನಿರ್ದೇಶಕ (ಡಿಜಿಪಿ) ಹುದ್ದೆಯಿಂದ ಎತ್ತಂಗಡಿಯಾಗಿದ್ದ ಟಿ.ಪಿ. ಸೇನ್‌ಕುಮಾರ್‌ ಅವರನ್ನು ಮತ್ತೆ ಆ ಸ್ಥಾನಕ್ಕೆ ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್‌ ಕೇರಳ ಸರ್ಕಾರಕ್ಕೆ ಸೋಮವಾರ ಸೂಚಿಸಿದೆ. ಇದರಿಂದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ತೀವ್ರ ಹಿನ್ನಡೆಯಾಗಿದೆ.

ವಿಜಯನ್‌ ಅವರು 2016ರ ಮೇ 25ರಂದು ಅಧಿಕಾರ ಸ್ವೀಕರಿಸಿದ ದಿನವೇ ಸೇನ್‌ಕುಮಾರ್‌ ಅವರನ್ನು ಡಿಜಿಪಿ ಹುದ್ದೆಯಿಂದ ಬೇರೆ ಹುದ್ದೆಗೆ ವರ್ಗಾಯಿಸಲಾಗಿತ್ತು. ಅವರು ಜೂನ್‌ 30ರಂದು ನಿವೃತ್ತರಾಗಲಿದ್ದಾರೆ.

ಕೊಲ್ಲಂ ಜಿಲ್ಲೆಯಲ್ಲಿ ಸುಮಾರು 106 ಮಂದಿಯ ಜೀವ ಬಲಿತೆಗೆದುಕೊಂಡ ಪುಟ್ಟಿಂಗಲ್‌ ದೇವಿ ದೇವಾಲಯದ ಸಿಡಿಮದ್ದು ದುರಂತ ಹಾಗೂ ದಲಿತ ಕಾನೂನು ವಿದ್ಯಾರ್ಥಿನಿ ಜಿಶಾ ಕೊಲೆ ಪ್ರಕರಣಗಳನ್ನು ಸೇನ್‌ಕುಮಾರ್‌ ಅವರು ಸಮರ್ಥವಾಗಿ ನಿಭಾಯಿಸಿಲ್ಲ ಎಂದು ಸರ್ಕಾರ ಅವರನ್ನು ತೆಗೆದುಹಾಕಿದ್ದನ್ನು ಸಮರ್ಥಿಸಿಕೊಂಡಿತ್ತು. ಇದನ್ನು ಸೇನ್‌ಕುಮಾರ್‌ ಕೇರಳ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಆದರೆ ಸರ್ಕಾರದ ಪರವಾಗಿ ತೀರ್ಪು ಬಂದಿದ್ದರಿಂದ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT