ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಪಯುಕ್ತ ಕೊಳವೆಬಾವಿ ಮುಚ್ಚಲು ಭೀಮ ಸೇನಾ ಒತ್ತಾಯ

Last Updated 25 ಏಪ್ರಿಲ್ 2017, 5:27 IST
ಅಕ್ಷರ ಗಾತ್ರ

ಗದಗ: ಜಿಲ್ಲೆಯಲ್ಲಿರುವ ತೆರೆದ ಕೊಳವೆ ಬಾವಿಗಳನ್ನು ಮುಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಜೈ ಭೀಮ ಸೇನಾ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಹುಬ್ಬಳ್ಳಿ ಒತ್ತಾಯಿಸಿದ್ದಾರೆ.ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬತ್ತಿಹೋಗಿರುವ ನೂರಾರು ಕೊಳವೆ ಬಾವಿಗಳನ್ನು ಶೀಘ್ರವೇ ಮುಚ್ಚಿಸಬೇಕು ಇಲ್ಲದಿದ್ದರೇ, ಮಕ್ಕಳು ಸಮಸ್ಯೆಯಲ್ಲಿ ಸಿಲುಕುತ್ತಾರೆ. ಆದ್ದರಿಂದ ಸರ್ಕಾರ ಎಚ್ಚೆತ್ತುಕೊಂಡು ಕೊಳವೆ ಬಾವಿಗಳನ್ನು ಮುಚ್ಚಿಸಲು ಅಗತ್ಯ ಕ್ರಮ  ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾತ್ರಾ ಸಮಿತಿ ಸಭೆ

ಗದಗ: ದುರ್ಗಾದೇವಿ ಜಾತ್ರಾ ಮಹೋತ್ಸವ ಸಮಿತಿಯ ಸಭೆ ಇದೇ 25 ರಂದು ಸಂಜೆ 7ಕ್ಕೆ ನಗರದ ಗಂಗಾಪುರ ಪೇಟೆಯ ದುರ್ಗಾದೇವಿ ಸಮುದಾಯ ಭವನದಲ್ಲಿ ನಡೆಯಲಿದೆ.ಸಮಿತಿ ಉಪಾಧ್ಯಕ್ಷ ಬಸವರಾಜ ಬೆಳಧಡಿ ಅಧ್ಯಕ್ಷತೆ ವಹಿಸುವರು. ಸಭೆಯಲ್ಲಿ ದೇಣಿಗೆ ಸಂಗ್ರಹ, ಜಾತ್ರಾ ಕಾರ್ಯಕ್ರಮ ರೂಪಿಸುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಸಮಿತಿಯ ಕಾರ್ಯದರ್ಶಿ ಶೇಖಣ್ಣ ಕವಳಿಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಸವೇಶ್ವರ ಜಯಂತಿ: ಸಭೆ

ಗದಗ: ಬಸವೇಶ್ವರ ಜಯಂತಿ ಅಂಗ ವಾಗಿ ಪೂರ್ವಭಾವಿ ಸಭೆ ಏ.25 ರಂದು ಸಂಜೆ 6.30ಕ್ಕೆ ನಗರದ ತೋಂಟ ದಾರ್ಯ ಮಠದ ಲಿಂಗಾಯತ ಪ್ರಗತಿ ಶೀಲ ಸಂಘದ ಕಚೇರಿಯಲ್ಲಿ ನಡೆಯ ಲಿದೆ.ಸಂಘದ ಅಧ್ಯಕ್ಷ ವಿರೂಪಾಕ್ಷಪ್ಪ ಬೆಳ್ಳೂಳ್ಳಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT