ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗತ್ವ ಅಲ್ಪಸಂಖ್ಯಾತರ ವಾರ್ಷಿಕ ಮಹಾಸಭೆ

Last Updated 25 ಏಪ್ರಿಲ್ 2017, 6:52 IST
ಅಕ್ಷರ ಗಾತ್ರ

ಮಂಗಳೂರು: ನವಸಹಜ ಸಮುದಾಯ ಸಂಘಟನೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಇದೇ 25ರಂದು ಮಂಗಳೂರು ಪುರಭವನ ದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ವಾರ್ಷಿಕ ಮಹಾಸಭೆ ಮತ್ತು ಸಾಂಸ್ಕೃತಿಕ ಕಾರ್ಯ ಕ್ರಮವನ್ನು ಏರ್ಪಡಿಸಲಾಗಿದೆ ಎಂದು ನವಸಹಜ ಸಮುದಾಯ ಸಂಘಟನೆಯ ಸದಸ್ಯೆ ಸಂಧ್ಯಾ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ ಸಚಿವ ಬಿ. ರಮಾನಾಥ ರೈ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಜೆ.ಆರ್‌. ಲೋಬೋ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಯಾಗಿ ಮುಖ್ಯ ಸಚೇತಕ ಐವನ್ ಡಿಸೋಜ, ಮೇಯರ್ ಕವಿತಾ ಸನಿಲ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲಣ್ಣ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಂದರ ಪೂಜಾರಿ, ರಾಜ್ಯ ಲೈಂಗಿಕ ಅಲ್ಪಸಂಖ್ಯಾತ ವೇದಿಕೆಯ ಅಧ್ಯಕ್ಷರು ಮಂಜುಳಾ, ಬೆಂ ಗಳೂರು ಪಯಣ ಸಂಘಟನೆಯ ಅಧ್ಯಕ್ಷೆ ಚಾಂದಿನಿ, ವಿಶಿಷ್ಟ ಅಲ್ಪಸಂ ಖ್ಯಾತರ ಸಿಬಿಒ ಒಕ್ಕೂಟದ ರಾಜ್ಯಾಧ್ಯಕ್ಷ ಸಮೀರ್ ಕರಜಾಗಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT