ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಎಸ್‌ಇ: ಇನ್ನು ಮುಂದೆ ಕಠಿಣ ಪ್ರಶ್ನೆಗಳಿಗೆ ಹೆಚ್ಚುವರಿ ಅಂಕವಿಲ್ಲ

ಹೊಸ ನಿಯಮ ಜಾರಿ
Last Updated 25 ಏಪ್ರಿಲ್ 2017, 11:31 IST
ಅಕ್ಷರ ಗಾತ್ರ
ನವದೆಹಲಿ: ಕೇಂದ್ರಿಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಹೊಸ ನಿಯಮ ಜಾರಿಗೆ ತಂದಿದ್ದು, ಪರೀಕ್ಷೆಗಳಲ್ಲಿ ಕಠಿಣ ಪ್ರಶ್ನೆಗಳಿಗೆ ನೀಡುತ್ತಿದ್ದ ಹೆಚ್ಚುವರಿ ಅಂಕಗಳನ್ನು ಇನ್ನು ಮುಂದೆ ನೀಡಲಾಗುವುದಿಲ್ಲ!
 
ಸಿಬಿಎಸ್‌ಇಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. 
 
ಅಂಕಗಳ ಕಡಿತದ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ  ರಾಜ್ಯ ಪರೀಕ್ಷಾ ಮಂಡಳಿಗಳ ಸಹಮತ ಪಡೆದು ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿಯು  ಹೊಸ ನಿಯಮ ಜಾರಿಗೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ  ಮನವಿ ಮಾಡಿತ್ತು. 
 
ಈ ಹೊಸ ನಿಯಮದ ಪ್ರಕಾರ ಇನ್ನು ಮುಂದೆ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಶೇ .15ರಷ್ಟು ಹೆಚ್ಚುವರಿ ಅಂಕಗಳನ್ನು ನೀಡಲಾಗುವುದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT