ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ಪಾಸ್‌ಪೋರ್ಟ್‌: ಛೋಟಾ ರಾಜನ್‌ಗೆ 7 ವರ್ಷ ಜೈಲು

Last Updated 25 ಏಪ್ರಿಲ್ 2017, 12:02 IST
ಅಕ್ಷರ ಗಾತ್ರ

ನವದೆಹಲಿ: ನಕಲಿ ಪಾಸ್‌ಪೋರ್ಟ್‌ ಪ್ರಕರಣದಲ್ಲಿ ಛೋಟಾ ರಾಜನ್‌ಗೆ  ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ 7 ವರ್ಷ ಜೈಲು ವಿಧಿಸಿದೆ.
ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವೀರೇಂದ್ರ ಕುಮಾರ್ ಗೋಯಲ್ ಅವರು ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದರು.

ಅಪರಾಧ ಒಳಸಂಚು ನಡೆಸಿ ನಕಲಿ ಪಾಸ್‌ಪೋರ್ಟ್‌ ಪಡೆಯಲು ರಾಜನ್‌ಗೆ ನೆರವಾದ ನಿವೃತ್ತ ಅಧಿಕಾರಿಗಳಾದ ಜಯಶ್ರೀ ದತ್ತಾತ್ರೇಯ ರಹಾತೆ, ದೀಪಕ್‌ ನಟವರಲಾಲ್‌ ಷಾ ಮತ್ತು ಲಲಿತಾ ಲಕ್ಷ್ಮಣನ್‌ ಅವರಿಗೂ 7 ವರ್ಷ ಜೈಲು ಶಿಕ್ಷೆ ವಿಧಿಸಿ ತಲಾ 15000 ರೂಪಾಯಿ ದಂಡ ಹಾಕಲಾಗಿದೆ.

ನ್ಯಾಯಾಂಗ ಬಂಧನದಲ್ಲಿರುವ ರಾಜನ್‌ (55) ಅಲಿಯಾಸ್‌ ರಾಜೇಂದ್ರ ಸದಾಶಿವ ನಿಕಲ್‌ಜೆಯನ್ನು ತಿಹಾರ್‌ ಜೈಲಿನಲ್ಲಿ ಇರಿಸಲಾಗಿದೆ.

ಅಪರಾಧ ಏನು
ಮೋಹನ್‌ ಕುಮಾರ್‌ ಎಂಬ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ನೀಡಿ ಛೋಟಾ ರಾಜನ್‌ ಎರಡು ಬಾರಿ ಪಾಸ್‌ಪೋರ್ಟ್‌ ಪಡೆದುಕೊಂಡಿದ್ದಾನೆ ಎಂದು ನ್ಯಾಯಾಲಯ ಹೇಳಿದೆ. ಮೊದಲಿಗೆ ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್‌ ಕಚೇರಿಯಿಂದ ಪಾಸ್‌ಪೋರ್ಟ್‌ ಪಡೆದುಕೊಳ್ಳಲಾಗಿದೆ. ನಂತರ ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ ಕಾನ್ಸಲ್‌ ಜನರಲ್‌ ಕಚೇರಿಯಿಂದ ಪಾಸ್‌ಪೋರ್ಟ್‌ ಪಡೆದುಕೊಳ್ಳಲಾಗಿದೆ.

ಬೆಂಗಳೂರು ಪಾಸ್‌ಪೋರ್ಟ್‌ ಕಚೇರಿಗೆ ನೀಡಿದ ಅರ್ಜಿಯಲ್ಲಿರುವ ಸಹಿ, ಆಸ್ಟ್ರೇಲಿಯಾದಲ್ಲಿ ನೀಡಲಾದ ಪಾಸ್‌ಪೋರ್ಟ್‌ನಲ್ಲಿರುವ ಸಹಿ ಮತ್ತು ರಾಜನ್‌ನ ಮಾದರಿ ಸಹಿಗಳು ಒಂದೇ ರೀತಿ ಇವೆ ಎಂದು ಕೋರ್ಟ್‌ ತಿಳಿಸಿದೆ.

ಮೂವರು ತಪ್ಪಿತಸ್ಥ ನಿವೃತ್ತ ಅಧಿಕಾರಿಗಳು ನಕಲಿ ದಾಖಲೆಗಳನ್ನು ಸ್ವೀಕರಿಸಿ ರಾಜನ್‌ಗೆ ಮೋಹನ್‌ ಕುಮಾರ್‌ ಎಂಬ ಹೆಸರಿನಲ್ಲಿ ಪಾಸ್‌ಪೋರ್ಟ್‌ ನೀಡಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT