ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 2, 3ರಂದು ಸಿಇಟಿ ಪರೀಕ್ಷೆ

Last Updated 25 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸ್‌ಗಳಿಗೆ ಮೇ 2 ಮತ್ತು 3ರಂದು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) 1.85 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ರಾಜ್ಯದ 404 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಆ ಪೈಕಿ 82 ಕೇಂದ್ರಗಳು ಬೆಂಗಳೂರಿನಲ್ಲಿವೆ.

‘ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು  ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸಹಾಯಕ ಆಯುಕ್ತರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಇಟ್ಟಂತಹ ಖಜಾನೆಗಳು ಮತ್ತು ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.

ಪರೀಕ್ಷೆಯ ಪ್ರಮುಖ ಅಂಶಗಳು
*ಪ್ರಶ್ನೆಪತ್ರಿಕೆಯನ್ನು ಮೊದಲ ಸಲ ಕನ್ನಡ,ಇಂಗ್ಲಿಷ್‌ನಲ್ಲಿ ಮುದ್ರಿಸಲಾಗಿದೆ
*ಓಎಂಆರ್ ಉತ್ತರ ಪತ್ರಿಕೆಗಳಲ್ಲಿ ಸರಿ ಉತ್ತರಗಳನ್ನು ನೀಲಿ ಅಥವಾ ಕಪ್ಪು ಮಸಿಯ ಪೆನ್‌ಗಳಿಂದ ಗುರುತಿಸಬೇಕು
*ಪರೀಕ್ಷೆಯ ಮೊದಲ ಕರೆಗಂಟೆ (ಬೆಲ್‌) ಬಾರಿಸುವ 30 ನಿಮಿಷಗಳ ಮುಂಚಿತವಾಗಿ ಕೇಂದ್ರಗಳಲ್ಲಿ ಹಾಜರಿಬೇಕು
*ಮಾನ್ಯತೆ ಇರುವ ಯಾವುದಾದರೊಂದು ಗುರುತಿನ ಚೀಟಿ ಕಡ್ಡಾಯವಾಗಿ  ತರಬೇಕು
*ಅಭ್ಯರ್ಥಿಗಳು ಪರೀಕ್ಷೆ ಸಮಯದಲ್ಲಿ ಕೈಗಡಿಯಾರ ಕಟ್ಟುವಂತಿಲ್ಲ. ಟ್ಯಾಬ್ಲೆಟ್‌, ಮೊಬೈಲ್‌, ಕ್ಯಾಲ್ಕುಲೇಟರ್‌ಗಳಿಗೆ ಒಯ್ಯುವಂತಿಲ್ಲ.
*ಪರೀಕ್ಷೆಯ ಎರಡನೆ ದಿನದ ಕೊನೆಯಲ್ಲಿ ಆಯಾ ಕೇಂದ್ರಗಳಿಂದ ಮಾಹಿತಿ ಪುಸ್ತಕ (ಬ್ರೋಚರ್‌) ಸಂಗ್ರಹಿಸಿಕೊಳ್ಳಬೇಕು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT