ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದತ್ತಪೀಠ ವಿವಾದ: ದಾಖಲೆ ಪರಿಶೀಲಿಸಿ ಕ್ರಮ

Last Updated 25 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು:  ಚಿಕ್ಕಮಗಳೂರು ಜಿಲ್ಲೆ ಬಾಬಾಬುಡನ್‌ಗಿರಿಯಲ್ಲಿರುವ ದತ್ತಪೀಠದ ವಿವಾದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ಬಿಜೆಪಿ ಶಾಸಕರಾದ ಸಿ.ಟಿ.ರವಿ, ಡಿ.ಎನ್‌.ಜೀವರಾಜ್‌ ಮತ್ತು ಕೆಲವು ಮಠಾಧೀಶರಿಗೆ ಅವರು ಈ ಭರವಸೆ ನೀಡಿದರು.

ಇನಾಂ ದತ್ತಾತ್ರೇಯ ಪೀಠ ಮತ್ತು ನಾಗೇನಹಳ್ಳಿಯ ಬಾಬಾಬುಡನ್‌ ದರ್ಗಾದ ಸಂಪೂರ್ಣ ದಾಖಲೆಗಳನ್ನು ಮುಖ್ಯಮಂತ್ರಿಯವರಿಗೆ ನೀಡಲಾಯಿತು ಎಂದು ಜೀವರಾಜ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಬಾಬಾಬುಡನ್‌ ದರ್ಗಾದ ಪಹಣಿ, ದತ್ತಪೀಠದ ಹೆಸರಿನಲ್ಲಿರುವ ಖಾತೆಯಲ್ಲಿ ಸರ್ಕಾರವೇ ₹ 1 ಕೋಟಿ ಇಟ್ಟಿರುವ ಮಾಹಿತಿ ನೀಡಲಾಯಿತು ಎಂದರು.
‘ಮೇ 9 ರ ಒಳಗೆ ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂಕೋರ್ಟ್‌ ಸೂಚಿಸಿದ್ದು, ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸವಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT