ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರು ಮಾರಾಟಕ್ಕೆ ಇ.ಡಿ ವಿರೋಧ

ಮಲ್ಯ ಒಡೆತನದ ಕಂಪೆನಿ
Last Updated 25 ಏಪ್ರಿಲ್ 2017, 19:35 IST
ಅಕ್ಷರ ಗಾತ್ರ

ಬೆಂಗಳೂರು: ‘ಉದ್ಯಮಿ ವಿಜಯ ಮಲ್ಯ ಒಡೆತನದ  ಯುನೈಟೆಡ್‌ ಬ್ರಿವರೀಸ್ ಹೋಲ್ಡಿಂಗ್ಸ್‌ ಲಿಮಿಟೆಡ್‌ (ಯುಬಿಎಚ್ಎಲ್‌) ಕಂಪೆನಿಯ ಷೇರುಗಳನ್ನು ಮಾರಾಟ ಮಾಡಲು ಸಾಧ್ಯವಿಲ್ಲ’ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಹೈಕೋರ್ಟ್‌ಗೆ ಮಂಗಳವಾರ ತಿಳಿಸಿದೆ.

ಈ ಕುರಿತಂತೆ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಲಿಖಿತ ಮಾಹಿತಿ ನೀಡಿರುವ ಜಾರಿ ನಿರ್ದೇಶನಾಲಯದ ವಕೀಲ ಎಸ್‌.ಮಹೇಶ್‌, ‘ಈಗಾಗಲೇ ಈ ಷೇರುಗಳನ್ನು ಇ.ಡಿ ವಶಕ್ಕೆ ಪಡೆದಿದೆ. ಅವುಗಳ ಮಾರಾಟ ಅಸಾಧ್ಯ’ ಎಂದು ತಿಳಿಸಿದ್ದಾರೆ.

ಈ ಹಿಂದಿನ ವಿಚಾರಣೆ ವೇಳೆ, ‘ಬ್ಯಾಂಕುಗಳ ಸಾಲ ತೀರಿಸಲು ಇ.ಡಿ ವಶದಲ್ಲಿರುವ ಷೇರುಗಳನ್ನು ಮಾರಾಟ ಮಾಡಲು ಅವಕಾಶ ನೀಡಬೇಕು’  ಎಂದು ಯುಬಿಎಚ್‌ಎಲ್‌ ಕೋರಿತ್ತು.

ಬೇಸಿಗೆ ರಜೆಯ ಮುಗಿದ ನಂತರ  ಈ ಪ್ರಕರಣವನ್ನು ವಿಚಾರಣೆಗೆ ಎತ್ತಿಕೊಳ್ಳಲು ನ್ಯಾಯಪೀಠ ನಿರ್ಧರಿಸಿತು. ಮಲ್ಯ  ಅವರು, ‘ಯುಬಿಎಚ್‌ಎಲ್‌’ನಲ್ಲಿ ಶೇಕಡ 52.34ರಷ್ಟು ಪ್ರಮಾಣದ ಷೇರುಗಳ ಒಡೆತನ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT