ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹ

Last Updated 25 ಏಪ್ರಿಲ್ 2017, 19:59 IST
ಅಕ್ಷರ ಗಾತ್ರ

ಬೆಂಗಳೂರು: ‘ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಕೂಡಲೇ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿ ಬೆಂಗಳೂರು ಪೂರ್ವ ತಾಲ್ಲೂಕು ಶಿಕ್ಷಕರ ಸಂಘದ ಸದಸ್ಯರು ಕೆ.ಆರ್‌.ಪುರದಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ಮಂಗಳವಾರ ಧರಣಿ ನಡೆಸಿದರು.

‘ರಾಜ್ಯ ಸರ್ಕಾರವು ಶಿಕ್ಷಕರ ವೇತನ ತಾರತಮ್ಯವನ್ನು ನಿವಾರಿಸಬೇಕು. ಪ್ರಾಥಮಿಕ ಶಿಕ್ಷಣಕ್ಕೆ ವಿಶೇಷ ಮಂಡಳಿಯನ್ನು ರಚನೆ ಮಾಡಬೇಕು’ ಎಂದು ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್  ಒತ್ತಾಯಿಸಿದರು.

‘2006ರ ನಂತರ ನೇಮಕಗೊಂಡ ಸರ್ಕಾರಿ ನೌಕರರಿಗೆ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್) ಕೂಡಲೇ ರದ್ದುಗೊಳಿಸಿ ಮೊದಲಿನ ಯೋಜನೆಯನ್ನೇ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಸರ್ಕಾರವು ಹೊಸ ಪಿಂಚಣಿ ಯೋಜನೆ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ. ನಿವೃತ್ತಿ ನಂತರ ನಮ್ಮ ಜೀವನವನ್ನು ಅಂಧಕಾರದ ಕೂಪಕ್ಕೆ ತಳ್ಳುವಂತಹ ಯೋಜನೆ ಇದು’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT