ನವದೆಹಲಿ: ದೇಶದ ರಾಜಧಾನಿ ದೆಹಲಿಯ ಮೂರು ಮಹಾನಗರಪಾಲಿಕೆಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಮೂರರಲ್ಲೂ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿದೆ.

ಮತ ಎಣಿಕೆ ಆರಂಭದಿಂದಲೂ ಎಲ್ಲ ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿತ್ತು.ಪೈಪೋಟಿ ನೀಡಿದ್ದ ಎಎಪಿ ಮತ್ತು ಕಾಂಗ್ರೆಸ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದಿವೆ.

ಉತ್ತರ ದೆಹಲಿಯ 103 ವಾರ್ಡ್ ಗಳಲ್ಲಿ ಬಿಜೆಪಿ 66, ಎಎಪಿ 20, ಕಾಂಗ್ರಸ್ 15 ಮತ್ತು ಇತರರು 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಇಲ್ಲಿ ಬಿಜೆಪಿ ಸುಲಭವಾಗಿ ಅಧಿಕಾರಕ್ಕೆ ಬಂದಿದೆ.

ಪೂರ್ವ ದೆಹಲಿಯ 63 ವಾರ್ಡ್ ಗಳಲ್ಲಿ ಬಿಜೆಪಿ 48, ಎಎಪಿ 10, ಕಾಂಗ್ರಸ್ 3 ಮತ್ತು ಇತರರು 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಪೂರ್ವ ದೆಹಲಿಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿದೆ.

ದಕ್ಷಿಣ ದೆಹಲಿಯ 104 ವಾರ್ಡ್ ಗಳಲ್ಲಿ ಬಿಜೆಪಿ 70, ಎಎಪಿ 16, ಕಾಂಗ್ರಸ್ 12 ಮತ್ತು ಇತರರು 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ದಕ್ಷಿಣ ದೆಹಲಿ ಮಹಾನಗರ ಪಾಲಿಕೆಯಲ್ಲೂ ಬಿಜೆಪಿ ಸುಲಭವಾಗಿ ಅಧಿಕಾರಕ್ಕೆ ಬಂದಿದೆ.

ಕಾಂಗ್ರೆಸ್ ಮತ್ತು ಎಎಪಿ ಪಕ್ಷಗಳಿಗೆ ಈ ಚುನಾವಣೆಯಲ್ಲಿ ಬಾರೀ ಮುಖಭಂಗವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.