ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18 ತಿಂಗಳಲ್ಲಿ ಕೇರಳ ಸಹಕಾರ ಬ್ಯಾಂಕ್‌

Last Updated 28 ಏಪ್ರಿಲ್ 2017, 19:36 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳ ಸರ್ಕಾರದ ಮಹತ್ವಾಕಾಂಕ್ಷೆಯ ಸಹಕಾರ ಬ್ಯಾಂಕ್‌ ಸ್ಥಾಪನೆಯ ಕನಸು ನನಸಾಗುವ ಕಾಲ ಸಮೀಪಿಸಿದೆ.

ರಾಜ್ಯದಲ್ಲಿ ಸಹಕಾರ ಕ್ಷೇತ್ರವನ್ನು ಬಲಗೊಳಿಸುವ ಉದ್ದೇಶದಿಂದ ಸಹಕಾರ ಬ್ಯಾಂಕ್‌ ಸ್ಥಾಪಿಸಲು ಮುಂದಾಗಿದ್ದ ರಾಜ್ಯ ಸರ್ಕಾರ ಇದಕ್ಕಾಗಿ  ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನ (ಐಐಎಂ–ಬಿ) ಎಂ.ಎಸ್‌. ಶ್ರೀರಾಮ್‌ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿತ್ತು.

ಈ ಸಮಿತಿ ಶುಕ್ರವಾರ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ  ವರದಿ ಸಲ್ಲಿಸಿದೆ. ಇನ್ನೂ 18 ತಿಂಗಳಲ್ಲಿ ಬ್ಯಾಂಕ್‌ ಸ್ಥಾಪನೆಯ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಶಿಫಾರಸು ಮಾಡಿದೆ. ರಾಜ್ಯದ ಎಲ್ಲ 14 ಸಹಕಾರ ಬ್ಯಾಂಕ್‌ಗಳನ್ನು ಉದ್ದೇಶಿತ ಸಹಕಾರ ಬ್ಯಾಂಕ್‌ನಲ್ಲಿ ವಿಲೀನಗೊಳಿಸುವಂತೆ ವರದಿ ಹೇಳಿದೆ. 

ರಾಜ್ಯ ಮಟ್ಟದ ಸಹಕಾರ ಬ್ಯಾಂಕ್‌ ಆಗಿ ಕಾರ್ಯನಿರ್ವಹಿಸಲಿದ್ದು, ನಬಾರ್ಡ್‌ ಮತ್ತು ಭಾರತೀಯ ರಿಸರ್ವ್‌ ಬ್ಯಾಂಕ್‌ ಒಪ್ಪಿಗೆ  ಪಡೆಯಬೇಕಿದೆ.
ಉದ್ದೇಶಿತ ಬ್ಯಾಂಕ್‌ಗೆ ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ₹1,000 ಕೋಟಿ ದುಡಿಯುವ ಬಂಡವಾಳ ಮೀಸಲಾಗಿಡುವಂತೆಯೂ ಸಮಿತಿ ಶಿಫಾರಸು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT