ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿಗಾಗಿ ಪ್ರತಿಭಟನೆ

Last Updated 29 ಏಪ್ರಿಲ್ 2017, 5:56 IST
ಅಕ್ಷರ ಗಾತ್ರ

ಆಲೂರು:  ಕುಡಿಯುವ ನೀರಲ್ಲದೇ ಜನರು ಪರಿತಪಿಸುತ್ತಿದ್ದು, ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ನೀರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ತಾಲ್ಲೂಕಿನ ನಾಕಲಗೂಡು ಗ್ರಾಮಸ್ಥರು, ಶುಕ್ರವಾರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.ಸತತ ಮೂರು ವರ್ಷದಿಂದ ಬರಗಾಲ ಬಿದ್ದಿದ್ದು, ರೈತರ ಬದುಕು ಸಂಕಷ್ಟಕ್ಕೀಡಾಗಿದೆ.  ಅಂತರ್ಜಲ ಬತ್ತಿಹೋಗಿ ಕುಡಿಯುವ ನೀರಿಲ್ಲದೆ ಜನರು, ಜಾನುವಾರುಗಳು ಸಂಕಟಪಡುತ್ತಿದ್ದು, ಇದರಿಂದ ಪಾರು ಮಾಡಲು ವಿವಿಧ ಯೋಜನೆಯಡಿ ಕೋಟ್ಯಂತರ ರೂಪಾಯಿ ಬಿಡುಗಡೆ ಮಾಡಿ ನೀರನ್ನು ಒದಗಿಸಬೇಕು ಎಂದು ಸರ್ಕಾರ ಸೂಚಿಸಿದ್ದರೂ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ನಟರಾಜು ನಾಕಲಗೂಡು ಆರೋಪಿಸಿದರು.

‘ನೀರು ಪೂರೈಸುವ ಯಾವುದೇ  ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಅಲ್ಲದೇ ತುರ್ತು ನೀರು ಸರಬರಾಜಿಗಾಗಿ ಸರ್ಕಾರ ತಹಶೀಲ್ದಾರ್ ಆವರಿಗೆ ₹ 30 ಲಕ್ಷ ಹಣ ನೀಡಿದ್ದರೂ ಈವರೆಗೂ ಯಾವುದೇ ಹಳ್ಳಿಗೆ ಟ್ಯಾಂಕರ್ ನೀರು ಪೂರೈಸಿಲ್ಲ’ ಎಂದು ದೂರಿದರು.ಸಂಬಂಧಪಟ್ಟ ಅಧಿಕಾರಿಗಳು ಜನರಿಗೆ ನೆರವಾಗದೆ ಮುಂದೆನಾದರೂ ಅನಾಹುತಗಳು ಸಂಭವಿಸಿದಲ್ಲಿ ಸರ್ಕಾರವನ್ನೇ ನೇರ ಹೊಣೆಯಾಗಬೇಕಾಗುವುದು. ರಜಾ ದಿನಗಳಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ ನಡೆಸುತ್ತಿದ್ದರೂ ಕುಡಿಯುವ ನೀರಿನ ಸಮಸ್ಯೆಯ ಕಾರಣ ಪೂರೈಕೆಯಲ್ಲಿ ವ್ಯತ್ಯಾಸವಾಗಿದೆ. ಅಲ್ಲದೆ ಈವರೆಗೂ ಯಾವುದೇ ಅಧಿಕಾರಿಗಳು ಬಿಸಿಯೂಟಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಜನರ ಸಮಸ್ಯೆಗೆ ಸ್ಪಂದಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕಣತೂರು ಗ್ರಾ.ಪಂ ಸದಸ್ಯ ಮೋಹನ್, ಗ್ರಾಮಸ್ಥರಾದ ವೀರೇಶ್, ಪಾಲಾಕ್ಷ, ಭಾಗೀರತಿ ಮುಂತಾದವರು ಉಪಸ್ಥಿತರಿದ್ದರು. ಗ್ರಾ.ಪಂ ಕಾರ್ಯದರ್ಶಿ ವಿನಯ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT