ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮುದಾಯ ಭವನದ ಕಾಮಗಾರಿ ಪರಿಶೀಲನೆ

Last Updated 29 ಏಪ್ರಿಲ್ 2017, 7:28 IST
ಅಕ್ಷರ ಗಾತ್ರ

ಗದಗ: ಅಖಿಲ ಭಾರತ ಗಾಣಿಗ ವಿದ್ಯಾ ಹಾಗೂ ಉದ್ಯೋಗ ವರ್ಧಕ ಟ್ರಸ್ಟ್‌ ವತಿಯಿಂದ ₹6 ಕೋಟಿ ವೆಚ್ಚದಲ್ಲಿ ನಗರದ ವಿವೇಕಾನಂದ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನದ ಕಾಮಗಾರಿಯನ್ನು ಸಮಿತಿ ಅಧ್ಯಕ್ಷ ನಿಂಗಪ್ಪ ಕೆಂಗಾರ ಗುರುವಾರ ಪರಿಶೀಲಿಸಿದರು.

‘ಸದ್ಯ ಎರಡನೆ ಮಹಡಿ ಕಾಮಗಾರಿ ನಡೆಯುತ್ತಿದ್ದು, ಒಟ್ಟು 1,500 ಜನರು ಒಟ್ಟಿಗೆ ಕುಳಿತು ಕಾರ್ಯಕ್ರಮ ವೀಕ್ಷಿಸಬಹುದು. ಊಟದ ಕೊಠಡಿಯನ್ನು ಪ್ರತ್ಯೇಕವಾಗಿ ನಿರ್ಮಿಸಲಾಗಿದೆ’ ಎಂದು ಹೇಳಿದರು.

ಇಲ್ಲಿ 800 ಜನರು ಏಕಕಾಲದಲ್ಲಿ ಊಟ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ. ಇದರ ಜತೆಗೆ 20 ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ. ಕಟ್ಟಡದ ಕಾಮಗಾರಿ ಅರ್ಧದಷ್ಟು ಮುಗಿದಿದ್ದು, ಒಂದು ವರ್ಷದಲ್ಲಿ ಮುಕ್ತಾಯ ಗೊಳ್ಳಲಿದೆ. ಸದ್ಯ ನಗರದಲ್ಲಿ ನಿರ್ಮಾಣವಾಗುತ್ತಿರುವ ದೊಡ್ಡ ಸಮುದಾಯ ಭವನ ಇದಾಗಿದೆ’ ಎಂದು ನಿಂಗಪ್ಪ ಕೆಂಗಾರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT