ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸೇವಾವಧಿಯಲ್ಲೂ ಸಾಧನೆ ಮುಂದುವರಿಸಿ’

Last Updated 29 ಏಪ್ರಿಲ್ 2017, 8:48 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಅಧಿಕಾರಿಗಳಾಗಿ ಆಯ್ಕೆಯಾದವರು ಮುಂದೆ ತಮ್ಮ ಸೇವಾ ಅವಧಿಯಲ್ಲೂ ಒಳ್ಳೆಯ ಕೆಲಸ ಮಾಡಿ ಜನರ ಪ್ರೀತಿ ಗಳಿಸುವಂತೆ’ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ್ ಸುರಳಕರ್ ಕಿವಿಮಾತು ಹೇಳಿದರು.ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಾಗಾರದ ಉದ್ಘಾಟನೆ ಹಾಗೂ ಜಿಲ್ಲೆಯಿಂದ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗೆ ಆಯ್ಕೆಯಾ ದವರಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಉನ್ನತ ಹುದ್ದೆಗಳಿಗೆ ಆಯ್ಕೆಯಾ ದವರ ಮೇಲೆ ಗುರುತರವಾದ ಜವಾಬ್ದಾರಿ ಇರುತ್ತದೆ. ಕೇವಲ ಹುದ್ದೆಗೆ ಆಯ್ಕೆಯಾದರೆ ಸಾಲದು, ನಿಮ್ಮ ಸೇವಾ ಅವಧಿಯಲ್ಲಿ ಸರ್ಕಾರದ ಯೋಜನೆ ಗಳನ್ನು ಪ್ರಾಮಾಣಿಕವಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಕೆಲಸ ಮಾಡಬೇಕು. ಆಗ ಮಾತ್ರ ನೀವು ಪಡೆದ ಯಶಸ್ಸಿಗೆ ಸಾರ್ಥಕತೆ ದೊರೆಯಲಿದೆ ಎಂದರು.

ಭವಿಷ್ಯದಲ್ಲಿ ಯಶಸ್ಸಿನ ಮೆಟ್ಟಿಲು ಏರಲು ವಿದ್ಯಾರ್ಥಿಗಳಿಗೆ ಪ್ರೇರಣೆ ತುಂಬಲು ಈ ಕಾರ್ಯಾಗಾರ ಹಮ್ಮಿ ಕೊಳ್ಳಲಾಗಿದೆ. ಈಗ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಮಾತ್ರ ಶೇ 100ರಷ್ಟು ನೂರರಷ್ಟು ಸಫಲತೆ ಸಾಧ್ಯ. ಆ ನಿಟ್ಟಿನಲ್ಲಿ ಜಿಲ್ಲಾ ಪಂಚಾಯ್ತಿಯಿಂದ ಸಕಲ ನೆರವು ಒದಗಿಸಸಲಾಗುವುದು ಎಂದರು.

ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಅಮರೇಶ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶಿವಾನಂದ ಕುಂಬಾರ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಸತೀಶ ನಾಯಕ ಹಾಜರಿದ್ದರು. 2014ನೇ ಸಾಲಿಗೆ ಗೆಜೆಟೆಡ್ ಪ್ರೊಬೆಷನರಿ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಇದೇ ವೇಳೆ ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT