ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆಯಲ್ಲಿ ಗೂಳಿ ಓಟ

Last Updated 29 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಷೇರುಪೇಟೆಗಳಲ್ಲಿ ಸದ್ಯ ಗೂಳಿ ಓಟ ಜೋರಾಗಿದೆ, ಸೂಚ್ಯಂಕಗಳು ಏರುಮುಖ ಚಲನೆಯಲ್ಲಿವೆ. ಹೀಗಿದ್ದರೂ ಗರಿಷ್ಠ ಮಟ್ಟವನ್ನು ಕಾಯ್ದುಕೊಳ್ಳುವಲ್ಲಿ ವಿಫಲವಾಗಿವೆ.

ಸಕಾರಾತ್ಮಕ ಮಟ್ಟದಲ್ಲಿ ವಾರದ  ವಹಿವಾಟು ಆರಂಭವಾಯಿತು. ಬುಧವಾರ ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) 30,133 ಅಂಶ ಮತ್ತು ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ(ಎನ್‌ಎಸ್‌ಇ) ನಿಫ್ಟಿ 9,352 ಅಂಶಗಳಿಗೆ ಏರಿಕೆ ಕಂಡು,ಹೊಸ ದಾಖಲೆ ಬರೆದವು. ಆದರೆ, ಮಾರಾಟದ ಒತ್ತಡಕ್ಕೆ ಒಳಗಾಗಿ ಗುರುವಾರ ಮತ್ತು ಶುಕ್ರವಾರ ಸೂಚ್ಯಂಕಗಳು ಗರಿಷ್ಠ ಮಟ್ಟದಿಂದ ಇಳಿಕೆ ಕಂಡವು.

ವಾರದ ವಹಿವಾಟಿನ ಅಂತ್ಯದಲ್ಲಿ ಬಿಎಸ್‌ಇ 30 ಸಾವಿರದ ಗರಿಷ್ಠ ಮಟ್ಟವನ್ನು ಕಾಯ್ದುಕೊಳ್ಳುವಲ್ಲಿ ವಿಫಲವಾಗಿದೆ. ಒಟ್ಟಾರೆ 553 ಅಂಶಗಳ ಏರಿಕೆ ಕಂಡು, 29,918 ಅಂಶಗಲ್ಲಿ ವಹಿವಾಟು ಅಂತ್ಯವಾಗಿದೆ.



ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್ಇ) ನಿಫ್ಟಿ 9,304 ಅಂಶಗಳಲ್ಲಿ ವಹಿವಾಟು ಅಂತ್ಯಗೊಳಿಸಿದೆ. ಹೂಡಿಕೆದಾರರಿಂದ ಮಾರಾಟದ ಒತ್ತಡ ಹೆಚ್ಚಾಗಿದ್ದರಿಂದ ಸೂಚ್ಯಂಕಗಳು ಗರಿಷ್ಠ ಮಟ್ಟದಿಂದ ಇಳಿಕೆ ಕಾಣುವಂತಾಗಿದೆ ಎಂದು ತಜ್ಞರು ಹೇಳಿದ್ದಾರೆ.

ವಾರದ ವಹಿವಾಟಿನ ಆರಂಭ ಸಕಾರಾತ್ಮಕವಾಗಿತ್ತು. ಎರಡೂ ಸೂಚ್ಯಂಕಗಳು ಸೋಮವಾರ ಮತ್ತು ಮಂಗಳವಾರ ಶೇ 1 ರಷ್ಟು ಗಳಿಕೆ ಕಂಡುಕೊಂಡವು. ಫ್ರಾನ್ಸ್‌ ಚುನಾವಣೆ ಮತ್ತು ಅಮೆರಿಕದಲ್ಲಿ ತೆರಿಗೆ ಸುಧಾರಣೆಗೆ ಸಂಬಂಧಿಸಿದ ಸುದ್ದಿಗಳು ಜಾಗತಿಕ ಮಟ್ಟದಲ್ಲಿ ಷೇರುಪೇಟೆ ಹೂಡಿಕೆದಾರರಲ್ಲಿ ಸಕಾರಾತ್ಮಕ ಭಾವನೆ ಮೂಡಿಸಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT