ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಕ್ವಾಷ್: ಫೈನಲ್‌ನಲ್ಲಿ ಜೋಷ್ನಾ–ದೀಪಿಕಾ ಪೈಪೋಟಿ

Last Updated 29 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಚೆನ್ನೈ: ಭಾರತದ ಪ್ರಮುಖ ಆಟಗಾರ್ತಿಯರಾದ ಜೋಷ್ನಾ ಚಿಣ್ಣಪ್ಪ ಹಾಗೂ ದೀಪಿಕಾ ಪಳ್ಳಿಕಲ್ ಏಷ್ಯನ್ ಸ್ಕ್ವಾಷ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಮುಖಾಮುಖಿ ಯಾಗಲಿದ್ದಾರೆ.

ಈ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತದ ಆಟಗಾರ್ತಿಯರು ಮಹಿಳೆಯರ ಸಿಂಗಲ್ಸ್‌ ವಿಭಾಗದ ಫೈನಲ್‌ನಲ್ಲಿ ಪರಸ್ಪರ ಪೈಪೋಟಿ ನಡೆಸಲಿದ್ದಾರೆ. ಅಲ್ಲದೇ ಪುರುಷರ ಸಿಂಗಲ್ಸ್‌ನಲ್ಲಿ ಫೈನಲ್‌ ತಲುಪಿದ ಮೊದಲ ಭಾರತೀಯ ಆಟಗಾರ ಎಂಬ ಶ್ರೇಯ ಕೂಡ ಸೌರವ್ ಘೋಷಾಲ್ ಅವರ ಪಾಲಾಗಿದೆ.

ಶನಿವಾರ ನಡೆದ ಸೆಮಿ  ಹಣಾಹಣಿಯಲ್ಲಿ ನಾಲ್ಕನೇ ಶ್ರೇಯಾಂಕದ ದೀಪಿಕಾ 11–9, 7–11, 11–7, 11–9ರಲ್ಲಿ ಅಗ್ರ ಶ್ರೇಯಾಂಕದ ಹಾಂಕಾಂಗ್‌ನ ಆಟ ಗಾರ್ತಿ ಅನ್ನಿ ಅವು ಅವರಿಗೆ ಆಘಾತ ನೀಡಿದರು.

ಟೂರ್ನಿಯ ಆರಂಭದಿಂದಲೂ ಪ್ರಶಸ್ತಿಯ ಪೈಪೋಟಿಯಲ್ಲಿದ್ದ  ಸ್ಪರ್ಧಿ ಅನ್ನಿ ಮೊದಲ ಗೇಮ್‌ನಲ್ಲಿ ಸೋಲು ಕಂಡರು. ಆದರೆ ಎರಡನೇ ಗೇಮ್‌ನಲ್ಲಿ ಅತ್ಯುತ್ತಮ ಸ್ಟ್ರೋಕ್‌ಗಳಿಂದ ಎದುರಾಳಿಗೆ ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT