ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ದಾಳಿ ಸಂಚುಕೋರ ಹಫೀಜ್ ಸಯೀದ್ ಗೃಹ ಬಂಧನದ ಅವಧಿ ವಿಸ್ತರಿಸಿದ ಪಾಕಿಸ್ತಾನ

Last Updated 30 ಏಪ್ರಿಲ್ 2017, 14:03 IST
ಅಕ್ಷರ ಗಾತ್ರ

ಲಾಹೋರ್: ಮುಂಬೈ ದಾಳಿಯ ಪ್ರಮುಖ ಸಂಚುಕೋರ, ಜಮಾತ್ ಉದ್ ದಾವಾ ಮುಖ್ಯಸ್ಥ ಹಫೀಜ್ ಸಯೀದ್‌ಗೆ ವಿಧಿಸಲಾಗಿರುವ ಗೃಹ ಬಂಧನದ ಅವಧಿಯನ್ನು 90 ದಿನಗಳ ಕಾಲ ವಿಸ್ತರಿಸಲಾಗಿದೆ.

ಈ ಬಗ್ಗೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಗೃಹ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಭಯೋತ್ಪಾದನೆ ನಿಗ್ರಹ ಕಾಯ್ದೆ ಅನ್ವಯ ಹಫೀಜ್ ಸಯೀದ್ ಮತ್ತು ಆತನ ನಾಲ್ವರು ಸಹಚರರ ಗೃಹಬಂಧನದ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ. ಈ ಕುರಿತು ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಪ್ರೊ. ಮಲಿಕ್ ಜಾಫರ್ ಇಕ್ಬಾಲ್, ಅಬ್ದುರ್ ರೆಹಮಾನ್ ಅಬಿದ್, ಖಾಜಿ ಕಾಸಿಫ್ ಹುಸೇನ್ ಮತ್ತು ಅಬ್ದುಲ್ಲಾ ಉಬೈದ್ ಗೃಹ ಬಂಧನಕ್ಕೊಳಗಾಗಿರುವ ಸಯೀದ್ ಸಹಚರರಾಗಿದ್ದಾರೆ.

ಶಾಂತಿ ಮತ್ತು ಭದ್ರತೆಗೆ ಧಕ್ಕೆ ತರುವ ಕೃತ್ಯಗಳಲ್ಲಿ ಶಾಮೀಲಾಗಿದ್ದ ಆರೋಪದಲ್ಲಿ ಸಯೀದ್ ಹಾಗೂ ಆತನ ಸಹಚರರನ್ನು ಜನವರಿ 30ರಿಂದ ಗೃಹ ಬಂಧನದಲ್ಲಿರಿಸಲಾಗಿದೆ.

ಸಯೀದ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನಿರ್ಬಂಧ ಹೇರುವುದಾಗಿ ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ನಂತರ ಅಲ್ಲಿನ ಪ್ರಧಾನಿ ನವಾಜ್ ಷರೀಫ್ ಕ್ರಮ ಕೈಗೊಂಡಿದ್ದರು ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT