ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 100ರಷ್ಟು ಗುರಿ ಸಾಧನೆಗೆ ನಿರ್ಧಾರ

ಪೋಲಿಯೊ ಅಭಿಯಾನಕ್ಕೆ ಚಾಲನೆ: 80,629 ಮಕ್ಕಳಿಗೆ ಲಸಿಕೆ ಗುರಿ, ಅಭಿಯಾನ ಯಶಸ್ವಿಗೆ ಸಿದ್ಧತೆ
Last Updated 1 ಮೇ 2017, 6:09 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 2ನೇ ಸುತ್ತಿನ ಪಲ್ಸ್‌ ಪೋಲಿಯೊ ಲಸಿಕಾ ಅಭಿಯಾನಕ್ಕೆ ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ನೀಡಿದರು.

ನಂತರ ಮಾತನಾಡಿದ ಅವರು, ಪಲ್ಸ್‌ ಪೋಲಿಯೊ ಅಭಿಯಾನದಿಂದ ಬಡಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಕಳೆದ ಬಾರಿಯಂತೆ ಶೇ 100ರಷ್ಟು ಗುರಿ ಸಾಧನೆಗೆ ನಿರ್ಧರಿಸಲಾಗಿದೆ. ಅಭಿಯಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ. 2 ಸಾವಿರ ಕ್ಕಿಂತ ಹೆಚ್ಚು ಆಶಾ ಹಾಗೂ ಅಂಗನ ವಾಡಿ ಕಾರ್ಯಕರ್ತರು ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಎರಡು ಮತ್ತು ಮೂರನೇ ದಿನ ಮನೆಗಳಿಗೆ ತೆರಳಿ ಪೋಲಿಯೊ ಲಸಿಕೆ ಹಾಕಲಾಗುತ್ತದೆ. ನಗರ ಪ್ರದೇಶದಲ್ಲಿ ಎರಡು, ಮೂರು ಮತ್ತು ನಾಲ್ಕನೇ ದಿನವೂ ಮನೆಗಳಿಗೆ ತೆರಳಿ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್. ಪ್ರಸಾದ್ ಮಾತನಾಡಿ, ಜಿಲ್ಲೆಯ 80,629 ಮಕ್ಕಳಿಗೆ ಪೋಲಿಯೊ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ 621 ಪೋಲಿಯೊ ಬೂತ್‌ ತೆರೆಯಲಾಗಿದೆ. ಈ ಪೈಕಿ ನಗರ ಪ್ರದೇಶ 92 ಮತ್ತು ಗ್ರಾಮೀಣ ಪ್ರದೇಶದಲ್ಲಿ 529 ಬೂತ್‌ ಗಳು ಕಾರ್ಯ ನಿರ್ವಹಿಸಲಿವೆ ಎಂದರು.

ಚಾಮರಾಜನಗರ 193, ಗುಂಡ್ಲು ಪೇಟೆ 158, ಕೊಳ್ಳೇಗಾಲ 223 ಮತ್ತು  ಯಳಂದೂರು ತಾಲ್ಲೂಕಿನಲ್ಲಿ 47 ಬೂತ್ ತೆರೆಯಲಾಗಿದೆ. ಜಿಲ್ಲೆಯಲ್ಲಿ ಒಟ್ಟು 130 ಮೇಲ್ವಿಚಾರಕರು, 2,484 ಲಸಿಕಾ ಕಾರ್ಯಕರ್ತರು ಕಾರ್ಯ ನಿರ್ವಹಿಸ ಲಿದ್ದಾರೆ. 10 ಮೊಬೈಲ್ ತಂಡಗಳನ್ನು ನಿಯೋಜಿಸಿ ಗುರಿ ಸಾಧಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಈ ಕಾರ್ಯಕ್ರಮದಲ್ಲಿ ಜಿ.ಪಂ ಅಧ್ಯಕ್ಷ ಎಂ. ರಾಮಚಂದ್ರ,ಆರೋಗ್ಯ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಪಿ. ಸದಾಶಿವ ಮೂರ್ತಿ, ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಹರೀಶ್‌ ಕುಮಾರ್, ಆರ್.ಸಿ.ಎಚ್.ಅಧಿಕಾರಿ ಡಾ.ವಿಶ್ವೇಶ್ವರಯ್ಯ, ಡಾ.ಭಾಗೀರಥಿ, ದೊರೆಸ್ವಾಮಿ ನಾಯಕ್ ಹಾಜರಿದ್ದರು.

*
ಪೋಲಿಯೊ ಲಸಿಕೆ ಹಾಕುವುದ ರಿಂದ ಮಕ್ಕಳಿಗೆ ಬರುವಂತಹ ಹಲವು ಕಾಯಿಲೆ ತಡೆಗಟ್ಟಲು ಸಹಕಾರಿ ಯಾಗಿದೆ. ಪೋಷಕರು ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು.
-ಸಿ.ಪುಟ್ಟರಂಗಶೆಟ್ಟಿ,
ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT