ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಕೃಷ್ಣಪ್ಪ ವಿರುದ್ಧ ಆರೋಪ

Last Updated 4 ಮೇ 2017, 19:43 IST
ಅಕ್ಷರ ಗಾತ್ರ

ಬೆಂಗಳೂರು: ‘ವಸತಿ ಸಚಿವ ಎಂ. ಕೃಷ್ಣಪ್ಪ ಅವರು ಬನ್ನೇರುಘಟ್ಟ ರಸ್ತೆಯ ಕೃಷ್ಣಪ್ಪ ಗಾರ್ಡನ್‌ ಪಕ್ಕ 4 ಎಕರೆ 20 ಗುಂಟೆ ಸರ್ಕಾರಿ ಭೂಮಿ ಕಬಳಿಸಿ ಬ್ಲ್ಯೂ ಜಾಯ್‌ ಅರಿಸ್ಟೊ ಎಂಬ ಹೆಸರಿನ ಖಾಸಗಿ ಬಡಾವಣೆ ನಿರ್ಮಿಸಿದ್ದಾರೆ’ ಎಂದು ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಎನ್‌.ಆರ್‌. ರಮೇಶ್‌ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಡಾವಣೆಯಲ್ಲಿ ನಿವೇಶನಗಳನ್ನು ಪ್ರತಿ ಚದರ ಅಡಿಗೆ ₹18,000 ದಂತೆ ಮಾರಾಟ ಮಾಡಲಾಗುತ್ತಿದೆ. ಕಬಳಿಸಿದ ಜಾಗದ ಮೌಲ್ಯ ₹350 ಕೋಟಿ’ ಎಂದರು.

ಗೋಷ್ಠಿಯಲ್ಲೇ ವಾಗ್ವಾದ: ಪತ್ರಿಕಾಗೋಷ್ಠಿ ನಡೆಯುತ್ತಿದ್ದ ಸ್ಥಳಕ್ಕೆ ಬಂದ ಬ್ಲ್ಯೂ ಜಾಯ್‌ ಆರಿಸ್ಟೊ ಬಡಾವಣೆ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಆರ್‌. ದಯಾನಂದ್‌, ವಕೀಲ ಅರವಿಂದ ಪಾಟೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಚಿಕ್ಕತಿಮ್ಮಯ್ಯ, ‘ಇದು ಸುಳ್ಳು ಆರೋಪ’ ಎಂದು ಆಕ್ಷೇಪಿಸಿದರು. ಈ ವೇಳೆ ರಮೇಶ್‌ ಹಾಗೂ ಅವರ ನಡುವೆ ವಾಗ್ವಾದ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT