ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹೆಣ್ಣು ಮಕ್ಕಳ ರಕ್ಷಣೆ ಇಂದಿನ ಅಗತ್ಯ’

ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ
Last Updated 5 ಮೇ 2017, 8:33 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಮಕ್ಕಳಿಗೆ ಸುರಕ್ಷಿತವಾಗಿ ರುವಂತಹ ಪ್ರದೇಶಗಳನ್ನು ಮಕ್ಕಳು ವಾಸಿಸಲು ಯೋಗ್ಯವಾದ ಪ್ರದೇಶ ವೆಂದು ಗುರುತಿಸಲಾಗುವುದು ಎಂದು ಅಂಗನವಾಡಿ ಮೇಲ್ವಿಚಾರಕಿ ರುದ್ರವ್ವ ಕೆಳಗೇರಿ ಅಭಿಪ್ರಾಯ ಪಟ್ಟರು.

ತಾಲ್ಲೂಕಿನ ತೆರಕಣಾಂಬಿ ಗ್ರಾಮ ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸಮಷ್ಠಿ ಸಮಗ್ರ ಅಭಿವೃದ್ಧಿ ಟ್ರಸ್ಟ್ ಮತ್ತು ಐಸೆಟ್ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಆಶಾ ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಸೆನ್ಸಿಟೈಸೇಶನ್ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಹೆಣ್ಣು ಮಕ್ಕಳ ರಕ್ಷಣೆ ಬಹಳ ಮುಖ್ಯವಾಗಿದೆ. ಲಿಂಗ ತಾರತಮ್ಯಗಳ ವಿರುದ್ಧ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ಸಮಾನತೆ ಸಾಧಿಸಲು ಹೆಣ್ಣಿನ ಉಳಿವು ಮುಖ್ಯ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿ ಸಿದ್ದ ಸಮಷ್ಠಿ ಟ್ರಸ್ಟ್‌ನ ಕಾರ್ಯನಿರ್ವಾ ಹಕ ಗಂಗಾಧರಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರವು ಸಮಾಜದಲ್ಲಿ ಲಿಂಗ ಸಮಾನತೆಯನ್ನು ತರುವ ಮೂಲಕ ಹೆಣ್ಣು ಮಕ್ಕಳನ್ನು ರಕ್ಷಿಸಿ ಅವರಿಗೆ ಸಂರಕ್ಷತೆ ನೀಡುವ ಅಂಗವಾಗಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಮೂಲಕ ಜಾರಿಗೆ ತಂದಿದೆ.

ಕಾರ್ಯಕ್ರಮದಲ್ಲಿ ಕಾರ್ಯಕರ್ತೆ ಯರಾದ ಮಂಜುಳ, ಗೀತಾ, ಜಯಮ್ಮ, ಗಾಯಿತ್ರಿ ಆಶಾ ಕಾರ್ಯಕರ್ತೆಯರಾದ ಮಹದೇವಮ್ಮ, ರಾಜೇಶ್ವರಿ ಇದ್ದರು.

*
ಪ್ರಸ್ತುತ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಗಳಿಂದ ರಕ್ಷಣೆ ನೀಡಿ, ಅವರಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನ ಒದಗಿಸಿಕೊಡಲು ಶ್ರಮಿಸಬೇಕಿದೆ.
–ಗಂಗಾಧರಸ್ವಾಮಿ,
ಕಾರ್ಯನಿರ್ವಾಹಕ, ಸಮಷ್ಠಿ ಟ್ರಸ್ಟ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT