ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೂಕ ಕಳೆದುಕೊಂಡು ಫಿಟ್ನೆಸ್ ಕಡೆಗೆ ಒತ್ತು ನೀಡಿದ್ದೇನೆ: ಮೊಹಮ್ಮದ್‌ ಶಮಿ

Last Updated 8 ಮೇ 2017, 14:55 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಕ್ರಿಕೆಟ್‌ ತಂಡದಿಂದ ವರ್ಷ ದೂರ ಉಳಿದಿದ್ದ ವೇಗಿ ಮೊಹಮ್ಮದ್‌ ಶಮಿ, ಜೂನ್‌ 1ರಿಂದ ಇಂಗ್ಲೆಂಡ್‌ನಲ್ಲಿ ಆರಂಭವಾಗಲಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಆಯ್ಕೆಯಾಗಿದ್ದಾರೆ.

ಶಮಿ 2015ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದರು.

‘ಎರಡು ವರ್ಷದಿಂದ ಏಕದಿನ ಕ್ರಿಕೆಟ್‌ನಿಂದ ದೂರ ಉಳಿದಿದ್ದು, ಆ ಸಮಯವನ್ನು ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳಲು ಮೀಸಲಿಟಿದೆ. ಚಾಂಪಿಯನ್ಸ್‌ ಟ್ರೋಫಿಗೆ ಆಯ್ಕೆಯಾಗಿರುವುದು ಸಂತಸ ತಂದಿದೆ. ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸ ಹೊಂದಿರುವುದಾಗಿ ಶಮಿ ತಿಳಿಸಿದ್ದಾರೆ.

ಪ್ರಸುತ್ತ ಶಮಿ  ಐಪಿಎಲ್‌ 10ನೇ ಆವೃತ್ತಿಯಲ್ಲಿ ಡೆಲ್ಲಿ ಡೆರ್‌ಡೆವಿಲ್ಸ್‌ ತಂಡದ ಪರ ಆಡಿರುವ 10 ಪಂದ್ಯಗಳಲ್ಲಿ 8 ವಿಕೆಟ್‌ ಪಡೆದಿದ್ದಾರೆ. ರಾಷ್ಟ್ರೀಯ ತಂಡಕ್ಕೆ ಮರಳಲು ಐಪಿಎಲ್‌ ಉತ್ತಮ ವೇದಿಕೆಯಾಯಿತು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT