ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ನ್ಯಾ.ಸಿ.ಎಸ್‌. ಕರ್ಣನ್‌ ಅವರಿಗೆ ಆರು ತಿಂಗಳ ಜೈಲುಶಿಕ್ಷೆ: ಸುಪ್ರೀಂ ಕೋರ್ಟ್‌

ತಕ್ಷಣವೇ ಬಂಧಿಸುವಂತೆ ಸೂಚನೆ
Last Updated 9 ಮೇ 2017, 7:12 IST
ಅಕ್ಷರ ಗಾತ್ರ

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಸಿ.ಎಸ್‌. ಕರ್ಣನ್‌ (59)ಅವರಿಗೆ ಸುಪ್ರೀಂ ಕೋರ್ಟ್‌ 6 ತಿಂಗಳ ಸಜೆ ವಿಧಿಸಿದೆ.

ಇದೇ ಮೊದಲ ಬಾರಿಗೆ ಹೈಕೋರ್ಟ್‌ ನ್ಯಾಯಮೂರ್ತಿ ಸ್ಥಾನದಲ್ಲಿರುವವರಿಗೆ ಜೈಲು ಶಿಕ್ಷೆಯಾಗಿದೆ. ತಕ್ಷಣವೇ ನ್ಯಾ.ಸಿ.ಎಸ್‌.ಕರ್ಣನ್‌ ಅವರನ್ನು ಬಂಧಿಸುವಂತೆ ಪಶ್ಚಿಮ ಬಂಗಾಳ ಪೊಲೀಸ್‌ ಮುಖ್ಯಸ್ಥರಿಗೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿ.ಎಸ್‌.ಖೆಹರ್‌ ಅವರ ನೇತೃತ್ವದ ಏಳು ನ್ಯಾಯಮೂರ್ತಿಗಳ ಪೀಠ ಈ ಆದೇಶವನ್ನು ನೀಡಿದೆ.

ನ್ಯಾ.ಕರ್ಣನ್‌ ಅವರ ಕುರಿತು ಮಾಧ್ಯಮಗಳು ಯಾವುದೇ ವರದಿ ಮಾಡದಂತೆಯೂ ಕೋರ್ಟ್‌ ಆದೇಶಿಸಿದೆ.

ಸುಪ್ರೀಂ ನ್ಯಾಯಮೂರ್ತಿಗಳಿಗೇ ಶಿಕ್ಷೆ!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್‌. ಖೇಹರ್‌  ಮತ್ತು ಇತರ ಏಳು ನ್ಯಾಯಮೂರ್ತಿಗಳಿಗೆ ಜಾತಿ ತಾರತಮ್ಯ ಎಸಗಿದ್ದಕ್ಕೆ ನ್ಯಾ.ಸಿ.ಎಸ್‌.ಕರ್ಣನ್‌ ಐದು ವರ್ಷ ಕಠಿಣ ಸಜೆ ವಿಧಿಸಿದ್ದರು.

ಈ ಎಂಟೂ ನ್ಯಾಯಮೂರ್ತಿಗಳು ನ್ಯಾಯಾಂಗ ಮತ್ತು ಆಡಳಿತಾತ್ಮಕ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ದಲಿತ ನ್ಯಾಯಮೂರ್ತಿ ಯೊಬ್ಬರಿಗೆ ಕಿರುಕುಳ ನೀಡಿ ಅವಮಾನಿಸಿದ್ದಾರೆ. ಇದು ಅನುಮಾನಕ್ಕೆ ಎಡೆ ಇಲ್ಲದಂತೆ ಸಾಬೀತಾಗಿದೆ ಎಂದು ಕರ್ಣನ್‌ ಹೇಳಿದ್ದರು.

ಕಳೆದ ಗುರುವಾರದೊಳಗೆ (ಮೇ 4) ಕರ್ಣನ್‌ ಅವರ ಮಾನಸಿಕ ಆರೋಗ್ಯ ಪರೀಕ್ಷೆ ನಡೆಸಿ  ವರದಿ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಆದರೆ ಈ ಪರೀಕ್ಷೆಗೆ ಒಳಗಾಗಲು ಅವರು ನಿರಾಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT