ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಯತೀಂದ್ರ ವಿರುದ್ಧ ಐ.ಟಿ ಇಲಾಖೆಗೆ ದೂರು

Last Updated 9 ಮೇ 2017, 19:52 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು ಬೇನಾಮಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೊತ್ತದ ಸ್ಥಿರಾಸ್ತಿ ಹೊಂದಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು’ ಎಂದು ಕೋರಿ ವರ್ತೂರಿನ ಕನಕದಾಸ ಎಂಬುವರು ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಸಿದ್ದಾರೆ.

‘ಯತೀಂದ್ರ ಅವರು, ಬೆಂಗಳೂರು, ಮುಂಬೈಗಳಲ್ಲಿ ಡಯಾಗ್ನಾಸ್ಟಿಕ್ಸ್‌ ಕೇಂದ್ರಗಳನ್ನು ಹೊಂದಿದ್ದಾರೆ ಮತ್ತು ಈ ಕೇಂದ್ರಗಳಲ್ಲಿ ಅಕ್ರಮವಾಗಿ ಕೋಟ್ಯಂತರ ಹಣ ಹೂಡಿಕೆ ಮಾಡಿದ್ದಾರೆ. ದುಬೈನಲ್ಲಿ ಕೋಟ್ಯಂತರ ಮೊತ್ತದ ಸ್ಥಿರಾಸ್ತಿ ಖರೀದಿಸಿದ್ದಾರೆ. ಈ ವ್ಯವಹಾರಗಳಲ್ಲಿ ಅಕ್ರಮ ಹಣ ಹೂಡಿಕೆಯಾಗಿದೆ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

‘ಯತೀಂದ್ರ ಅವರು ಕಂಪೆನಿಯ ಜೊತೆ ಹೊಂದಿರುವ ಹಣಕಾಸು  ವ್ಯವಹಾರಗಳನ್ನು ಬೇನಾಮಿ ಆಸ್ತಿ ವರ್ಗಾವಣೆ ಕಾಯ್ದೆ–1988 ಅಡಿಯಲ್ಲಿ ತನಿಖೆ ನಡೆಸಬೇಕು’ ಎಂದು ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT