ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿವಳಿ ತಲಾಖ್‌ ಅತ್ಯಂತ ಕೆಟ್ಟ ಪದ್ಧತಿ: ಸುಪ್ರೀಂ ಕೋರ್ಟ್‌

Last Updated 12 ಮೇ 2017, 10:51 IST
ಅಕ್ಷರ ಗಾತ್ರ

ನವದೆಹಲಿ: ಮುಸ್ಲಿಂ ಸಮುದಾಯದಲ್ಲಿರುವ ಮೂರು ಬಾರಿ ‘ತಲಾಖ್‌’ ಹೇಳಿ ವಿಚ್ಛೇದನ ಪಡೆಯುವುದು ಅತ್ಯಂತ ಕೆಟ್ಟ ಪದ್ಧತಿ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಅಭಿಪ್ರಾಯಪಟ್ಟಿದೆ.

ಎರಡನೇ ದಿನವಾದ ಶುಕ್ರವಾರವು ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗೆಗಿನ ಚಾರಿತ್ರಿಕ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸಿತು.

ನಿನ್ನೆ ಬಹುಪತ್ನಿತ್ವದ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಾಲಯ ತಿಳಿಸಿತ್ತು. ಇಂದಿನ ವಿಚಾರಣೆಯಲ್ಲಿ ಇದೊಂದು ಕೆಟ್ಟ ಪದ್ಧತಿ ಎಂದು  ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ ಅಭಿಪ್ರಾಯಪಟ್ಟಿದೆ.

ಕೆಲವು ಇಸ್ಲಾಮಿಕ್‌ ದೇಶಗಳಲ್ಲಿ ತ್ರಿವಳಿ ತಲಾಖ್‌ ನಿಷೇಧಿಸಲಾಗಿದ್ದು ಆ ದೇಶಗಳ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT